ಬೆಂಗಳೂರು: ರಾತ್ರಿ ಕರ್ಫ್ಯೂ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿದ್ದವು. ಇದೀಗ ಅದಕ್ಕೆ ಉತ್ತರ ದೊರೆತಿದೆ. ಇಂದಿನಿಂದ 9 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಕೋವಿಡ್ 19 ಸೋಂಕು ರೂಪಾಂತರವಾದ ಹಿನ್ನೆಲೆಯಲ್ಲಿ ಹಾಗೂ ಅದರ ಹರಡುವಿಕೆಯ ಭೀತಿಯಿಂದ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 9 ದಿನಗಳ ಕಾಲ ಪ್ರತಿದಿನ ರಾತ್ರಿ 10ರಿಂದ ಬೆಳಗ್ಗೆ 6 ರವರೆಗೆ ಈ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ವ್ಯಾಪಾರ-ವಹಿವಾಟುಗಳು ಬಂದ್ ಆಗಿರುತ್ತವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಈ ಕೆಲದಿನಗಳಲ್ಲಿ ಆಚರಿಸಲಾಗುವ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೂ ತಡೆ ಹಾಕಿದಂತೆ ಹಾಗೂ ಆ ಸಂದರ್ಭಗಳಲ್ಲಿ ಹೆಚ್ಚಿನ ಜನ ಒಟ್ಟಿಗೆ ಸೇರಿದಂತೆ ಈ ಕರ್ಫ್ಯೂ ತಡೆಯಲಿದೆ.