ಬೆಂಗಳೂರು : ಪ್ರೀಮಿಯಂ ಸ್ವೀಕರಿಸಿದ ಕ್ಷಣದಿಂದಲೇ ಪಾಲಿಸಿ ಜಾರಿಗೆ ಬಂದು ವಾಹನವು ಹಾನಿ ಪರಿಹಾರದ ವ್ಯಾಪ್ತಿಗೆ ಬರಲಿದೆ ಎಂದು ವಾಹನ ವಿಮೆ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನ್ಯಾಯಮೂರ್ತಿ ಹಂಚೇಟಿ ಸಂಜೀವ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು, ವಾಹನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿ ವಿಚಾರಣೆ ನಡೆಸಿತು. ವಿಮೆಯ ಪ್ರೀಮಿಯಂ ಮೊತ್ತ ಸ್ವೀಕರಿಸಿದ ದಿನದ ಮಧ್ಯರಾತ್ರಿಯಿಂದ ಪಾಲಿಸಿ ಜಾರಿಯಾಗಿ ಹಾನಿ ಪರಿಹಾರದ ವ್ಯಾಪ್ತಿ ಆರಂಭವಾಗುತ್ತದೆ ಎಂಬ ವಿಮಾ ಕಂಪನಿಯ ವಾದವನ್ನು ಹೈಕೋರ್ಟ್ ತಿರಸ್ಕರಿಸಿದ್ದಲ್ಲದೆ, ಪ್ರೀಮಿಯಂ ಸ್ವೀಕರಿಸಿದ ಕ್ಷಣದಿಂದಲೇ ಪಾಲಿಸಿ ಜಾರಿಗೆ ಬರುತ್ತದೆ. ಅಷ್ಟೇ ಅಲ್ಲದೆ ವಾಹನವು ಹಾನಿ ಪರಿಹಾರದ ವ್ಯಾಪ್ತಿಗೆ ಬರಲಿದೆ ಎಂದು ತೀರ್ಪು ನೀಡಿದರು.