ಬೆಂಗಳೂರು : ಎಸ್ ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದವರು ಎಂಬ ಒಂದೇ ಕಾರಣಕ್ಕೆ ಐಪಿಸಿ ಅಡಿಯಲ್ಲಿ ದೌರ್ಜನ್ಯಕ್ಕೆ ಒಳಗಾದವರು ಎಂದು ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟ ರಾಜ್ಯ ಹೈಕೋರ್ಟ್ .
ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ನಟರಾಜನ್ ಒಳಗೊಂಡ ನ್ಯಾಯಪೀಠವು ಈ ಕುರಿತಾದ ಹೇಳಿಕೆಯನ್ನು ನೀಡಿದ್ದು, ಮಂಗಳೂರಿನಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ, ಕೊಲೆಯಾದ ವ್ಯಕ್ತಿ ಎಸ್ ಸಿ, ಎಸ್ ಟಿ ಎಂಬ ಕಾರಣಕ್ಕೆ ಆರೋಪಿಗಳಿಗೆ ಐಪಿಸಿ ಮತ್ತು ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ಸಂಬಂಧ ಅಧೀನ ನ್ಯಾಯಾಲಯವು ವ್ಯಕ್ತಿಯೊಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಈ ಕುರಿತು, ಹೈಕೋರ್ಟ್ ನಲ್ಲಿ ವ್ಯಕ್ತಿಯೊಬ್ಬರು ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆಯಡಿ ಅಧೀನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ಮಾಡುವ ಸಂದರ್ಭದಲ್ಲಿ, ಐಪಿಸಿ ಅಡಿಯಲ್ಲಿ ದೌರ್ಜನ್ಯಕ್ಕೆ ಒಳಗಾದವರು ಪರಿಶಿಷ್ಟ ಜಾರಿ ಮತ್ತು ಪಂಗಡಕ್ಕೆ ಸೇರಿದವರು ಎಂಬ ಒಂದೇ ಕಾರಣಕ್ಕೆ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಶಿಕ್ಷೆ ವಿಧಿಸಲು ಆಗುವುದಿಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ.