ಬೆಂಗಳೂರು: ಹಸಿರು ವಲಯ ಜಿಲ್ಲೆಗಳಲ್ಲಿ ವಾಸಿಸುತ್ತಿರುವಂತಹ ನಿವಾಸಿಗಳಿಗೆ ರಾಜ್ಯ ಸರ್ಕಾರವು ದೊಡ್ಡ ಉಡುಗೊರೆ ನೀಡಿದ್ದು, ಕಸ್ತೂರಿ ರಂಗನ್ ವರದಿ ನಿರಾಕರಿಸಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿನ ಹಲವಾರು ಕುಟುಂಬಗಳು ಕಸ್ತೂರಿ ರಂಗನ್ ವರದಿಯಿಂದಾಗಿ ಸಂಕಷ್ಟಕ್ಕೆ ಸಿಲುಕಲಿದ್ದವು. ಆದರೆ ರಾಜ್ಯ ಸರ್ಕಾರವು ಇದನ್ನು ತಿರಸ್ಕರಿಸಿ ನಿವಾಸಿಗಳಿಗೆ ಉಡುಗೊರೆ ನೀಡಿದೆ.
ಪಶ್ಚಿಮ ಘಟ್ಟದಲ್ಲಿ ಈ ವರದಿಯನ್ನು ಜಾರಿಗೊಳಿಸಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಮತ್ತು ಅರಣ್ಯ ಸಚಿವ ಆನಂದ್ ಸಿಂಗ್ ಅವರನ್ನು ಒಳಗೊಂಡಿರುವ ಸಮಿತಿಯು ರಾಜ್ಯ ಸರ್ಕಾರಕ್ಕೆ ಪಸ್ತಾಪ ಮಾಡಿದೆ.
ಸರ್ಕಾರವು ಸಮಿತಿಯ ವರದಿಯನ್ನು ಸ್ವೀಕರಿಸಿದ್ದು, ಮುಂದಿನ ಎರಡು ದಿನಗಳಲ್ಲಿ ಇದರ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಿದೆ.
ವಿಜ್ಞಾನಿ ಕಸ್ತೂರಿ ರಂಗನ್ ಮತ್ತು ಅವರ ತಂಡವು ರಚಿಸಿರುವಂತಹ ವರದಿಯ ಅನುಷ್ಠಾನ ಮಾಡಲು ಹಸಿರು ಪ್ರದೇಶಗಳ ರಾಜ್ಯಗಳಿಂದ ಕೇಂದ್ರ ಸರ್ಕಾರವು ಸಲಹೆ ಕೇಳಿತ್ತು.
ವರದಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಸುಮಾರು 40 ಗ್ರಾಮ ಪಂಚಾಯತ್ ಗಳ ಗ್ರಾಮಸ್ಥರು ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಿದ್ದರು.