ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದರು. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿದ್ದಾರೆ.