ಬೆಂಗಳೂರು: ಹೊಸ ವರ್ಷಾಚರಣೆಗೆ ಜನರು ಸೇರುವುದನ್ನು ತಡೆಯಲು ಇಂದು ರಾತ್ರಿ ಎಂಟು ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ತನಕ ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರಸ್ತೆ, ರೆಸಿಡೆನ್ಸಿ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ತಿಳಿಸಿದರು.
ರೆಸ್ಟೋರೆಂಟ್, ಪಬ್, ಪಾರ್ಟಿಗಳಲ್ಲಿ ಮುಂಗಡ ಟಿಕೆಟ್ ಮತ್ತು ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬುಧವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಡೆಯುವಂತಹ ಬೈಕ್ ರೇಸ್, ವೀಲ್ಹಿಂಗ್ ಮೊದಲಾದವುಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.