ಬೆಂಗಳೂರು: ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುವುದು. ಶಾಲೆಗೆ ಮಕ್ಕಳನ್ನು ಕಳುಹಿಸಲು ಹಿಂಜರಿಕೆ ಮಾಡಬಾರದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪೋಷಕರಲ್ಲಿ ಮನವಿ ಮಾಡಿಕೊಂಡಿರುವರು.
ಆತಂಕ ಇರುವಂತಹ ಪೋಷಕರು ಶಾಲೆಗಳಿಗೆ ಕಳುಹಿಸುವಂತೆ ಒತ್ತಾಯವಿಲ್ಲ. ಶಾಲೆಗಳಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಆನೇಕಲ್ ತಾಲೂಕಿನ ಹೆಬ್ಬಗೋಡಿ ಸರ್ಕಾರಿ ಶಾಲೆಗೆ ತೆರಳಿ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.
ವಿದ್ಯಾರ್ಥಿಗಳು ಯಾವುದೇ ಭಯ ಇಟ್ಟುಕೊಳ್ಳದೆ ಚೆನ್ನಾಗಿ ಓದಿಕೊಳ್ಳಬೇಕು ಎಂದು ಅವರು ಮಕ್ಕಳಿಗೆ ಸಲಹೆ ನೀಡಿದರು.