ಬೆಂಗಳೂರು: ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ಪಿ ಜಿ ಹರ್ಲಂಕರ್ ನಿಧನರಾಗಿದ್ದು, ಅವರ ಮೃತದೇಹವನ್ನು ಸಂಶೋಧನೆಗಾಗಿ ವೈದ್ಯಕೀಯ ಕಾಲೇಜಿಗೆ ನೀಡಲಾಗಿದೆ.
1983 ಮಾರ್ಚ್ ನಲ್ಲಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಲು ಪ್ರಾರಂಭಿಸಿದ ಹರ್ಲಂಕರ್, ಬೆಂಗಳೂರು ಪೊಲೀಸ್ ಆಯುಕ್ತ ಪದವಿ ಸೇರಿದಂತೆ ಹಲವು ಪ್ರತಿಷ್ಠಿತ ಪದವಿಗಳನ್ನು ಅಲಂಕರಿಸಿದ್ದಾರೆ. ಪ್ರಸ್ತುತ ತಮ್ಮ ವೃತ್ತಿ ಜೀವನದಿಂದ ನಿವೃತ್ತರಾಗಿದ್ದರು.
ಸಾವಿನ ನಂತರ ತಮ್ಮ ಮೃತದೇಹವನ್ನು ಅಂತ್ಯಕ್ರಿಯೆ ಮಾಡುವ ಬದಲು ಸಂಶೋಧನೆಗಾಗಿ ನೀಡಬೇಕೆಂಬುದು ಅವರ ಇಚ್ಛೆಯಾಗಿತ್ತು. ಈ ಕಾರಣದಿಂದಲೇ ಮೃತದೇಹವನ್ನು ವೈದ್ಯಕೀಯ ವಿದ್ಯಾರ್ಥಿಗಳ ಸಂಶೋಧನೆಗಾಗಿ ಹಸ್ತಾಂತರಿಸಲು ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.