ಬೆಂಗಳೂರು: ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯನ್ನು ಮರಳಿ ಜಾರಿಗೆ ತರುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿರುವರು.
2013ರಿಂದ 2018ರ ತನಕ ಕಾಂಗ್ರೆಸ್ ಸರ್ಕಾರವು ಆಡಳಿತದಲ್ಲಿರಲು ಅನ್ನಭಾಗ್ಯ ಯೋಜನೆಯು ಪ್ರಮುಖ ಕಾರಣವಾಗಿತ್ತು. ಇದರಿಂದಾಗಿ ಬಡವರ ಮತಗಳು ಕಾಂಗ್ರೆಸ್ ಪರ ವಾಲಿದ್ದವು. 2023ರಲ್ಲಿ ಮತ್ತೆ ಅಧಿಕಾರಕ್ಕೇರಲು ಇದೇ ಯೋಜನೆಯನ್ನು ಜನರ ಮುಂದಿಡಲು ಸಿದ್ದರಾಮಯ್ಯ ಬಯಸಿದ್ದಾರೆ.
2023ರಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯನ್ನು ಮರಳಿ ಜಾರಿಗೆ ತರಲಾಗುವುದು ಎಂದು ಬಾಗಲಕೋಟೆಯಲ್ಲಿ ಅವರು ತಿಳಿಸಿದರು. ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತೀ ಬಿಪಿಎಲ್ ಕುಟುಂಬವು ತಿಂಗಳಿಗೆ ಹತ್ತು ಕೆಜಿ ಅಕ್ಕಿ ಪಡೆಯಲಿದೆ.