ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಅವರ ಪತ್ನಿ ವರಲಕ್ಷ್ಮಿ ಗುಂಡೂರಾವ್ ಅವರು ಮಂಗಳವಾರ ರಾತ್ರಿ ಕೊರೊನಾ ವೈರಸ್ ಸೋಂಕಿನಿಂದಾಗಿ ನಿಧನರಾಗಿದ್ದಾರೆ.
ಕೊರೊನಾ ಸೋಂಕು ತಗುಲಿದೆ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ದಿ. ಗುಂಡೂರಾವ್ ಅವರು 1993ರ ಆಗಸ್ಟ್ನಲ್ಲಿ ನಿಧನರಾಗಿದ್ದರು. ಅವರ ನಿಧನದ ನಂತರ 1996ರಲ್ಲಿ ವರಲಕ್ಷ್ಮಿ ಗುಂಡೂರಾವ್ ಕೂಡ ರಾಜಕೀಯಕ್ಕೆ ಇಳಿದಿದ್ದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಅವರು ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನ್ನು ಕಂಡಿದ್ದರು.
ವರಲಕ್ಷ್ಮಿ ಅವರಿಗೆ ಮೂವರು ಪುತ್ರರಿದ್ದು, ಅವರ ಅಂತ್ಯಕ್ರಿಯೆ ದೇವನಹಳ್ಳಿಯ ತೋಟದಲ್ಲಿ ಇಂದು ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.