ಬೆಂಗಳೂರು: ಜನವರಿ 17ರಿಂದ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನವು ಆರಂಭವಾಗಲಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ.
ಕೋವಿಡ್-19 ಭೀತಿಯಿದ್ದರೂ ಪೋಲಿಯೊ ಲಸಿಕೆ ಅಭಿಯಾನ ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಕೋವಿಡ್-19ನಂತೆ ಪೋಲಿಯೊ ನಿಯಂತ್ರಣವು ಅತೀ ಅಗತ್ಯವಾಗಿದೆ. ಇದರಿಂದಾಗಿ ಪ್ರತೀ ವರ್ಷ ನಡೆಸುವಂತೆ ಈ ವರ್ಷವು ಪೋಲಿಯೊ ಲಸಿಕೆ ಅಭಿಯಾನವನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಐದು ವರ್ಷಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವುದು ಕಡ್ಡಾಯವಾಗಿದೆ.