ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಹಿನ್ನೆಲೆ ಜೈಲುಪಾಲಾಗಿದ್ದ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಸೋಮವಾರ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.
ಹೈಕೋರ್ಟ್ ನಲ್ಲಿ ನಟಿ ರಾಗಿಣಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಬಗ್ಗೆ ಸೋಮವಾರ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಸಿಸಿಬಿ ಪರ ಸುಪ್ರೀಂಕೋರ್ಟ್ ತುಷಾರ್ ಮಹೆತಾ ಅವರು ವಾದ ಮಂಡಿಸಿದ್ದು, ರಾಗಿಣಿ ಪರ ವಕೀಲರಾದ ಶಾಹಿಲ್ ಭಾಲೈಕ್ ಮಾಡಿಸಲಿದ್ದಾರೆ.