ಬೆಂಗಳೂರು: ಗುರುವಾರ ಸಿಸಿಬಿ ಪೊಲೀಸ್ ಕಚೇರಿಯಿಂದ ನೀಡಿದ ನೋಟಿಸ್ ಪರಿಗಣಿಸಿ ಯುವರಾಜ್ ಸ್ವಾಮಿ ವಂಚನೆ ಪ್ರಕರಣ ಸಂಬಂಧ ತನಿಖೆಗೆ ಸಹಕರಿಸಲು ನಟಿ ರಾಧಿಕಾ ಕುಮಾರಸ್ವಾಮಿ ಶುಕ್ರವಾರ ಕಚೇರಿಯಲ್ಲಿ ಹಾಜರಾಗಿದ್ದರು.
ಸಿಸಿಬಿ ಕಚೇರಿಗೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ರಾಧಿಕಾ, ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ತರಳುತ್ತಿದ್ದೇನೆ. ವಿಚಾರಣೆ ಪೂರ್ಣಗೊಂಡ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.