News Kannada
Tuesday, January 31 2023

ಬೆಂಗಳೂರು ನಗರ

ಬಿಬಿಎಂಪಿ ಆಡಳಿತ ವ್ಯವಸ್ಥೆಗಳಲ್ಲಿ ಬದಲಾವಣೆ; ಜನವರಿ 11ರಿಂದ ಜಾರಿ

Photo Credit :

ಬಿಬಿಎಂಪಿ ಆಡಳಿತ ವ್ಯವಸ್ಥೆಗಳಲ್ಲಿ ಬದಲಾವಣೆ; ಜನವರಿ 11ರಿಂದ ಜಾರಿ

ಬೆಂಗಳೂರು: ಜ.11ರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಆಡಳಿತ ವ್ಯವಸ್ಥೆಯನ್ನು ಬದಲಾವಣೆ ಮಾಡುವಂತಹ ಮಹತ್ವದ ಮಸೂದೆ ಅಧಿಕೃತವಾಗಿ ಜಾರಿಗೆ ಬರಲಿದ್ದು, ಬಿಬಿಎಂಪಿ ವಿಧೇಯಕ-2020ಕ್ಕೆ ರಾಜ್ಯಪಾಲರು ಸಹಿಹಾಕಿದ್ದಾರೆ.

ವಿಧಾನಸಭೆ ಮತ್ತು ವಿಧಾನಪರಿಷತ್‍ನ ಎರಡು ಅಧಿವೇಶನದಲ್ಲಿ ಸುದೀರ್ಘವಾದ ಚರ್ಚೆಗಳ ನಂತರ, ಪರಿಶೀಲನೆಗೆ ಒಳಪಟ್ಟು ಅಂತಿಮವಾಗಿ ಉಭಯ ಸದನಗಳು ಅಂಗೀಕರಿಸಿರುವ ಮಸೂದೆಯನ್ನು ರಾಜ್ಯಪಾಲರು ಮಂಜೂರು ಹಾಕುವ ಮೂಲಕ ಜಾರಿಗೊಳಿಸಿದ್ದಾರೆ.

ನೂತನ ಕಾಯ್ದೆಯು ಬೆಂಗಳೂರಿನ ದೂರಗಾಮಿ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪುಗೊಂಡಿದ್ದು, ಆಡಳಿತ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಅಧಿಕೃತವಾಗಿ ಘೋಷಿಸಿರುವ ನಗರಾಭಿವೃದ್ಧಿ ಇಲಾಖೆ, ಜನವರಿ 11ರಿಂದ ಜಾರಿಗೆ ಬರಲಿದೆ ಎಂದು ಪ್ರಕಟಿಸಿದೆ.

ಬಿಬಿಎಂಪಿಗೆ ಇನ್ನು ಮುಂದೆ 8 ವಲಯಗಳಿಗೂ ಪ್ರತ್ಯೇಕ ಆಯುಕ್ತರನ್ನು ನೇಮಿಸಲಾಗುತ್ತದೆ. ಕೇಂದ್ರ ಕಚೇರಿಯಲ್ಲಿ ಈಗಿರುವ ಆಯುಕ್ತರು ಇನ್ನು ಮುಂದೆ ಮುಖ್ಯ ಆಯುಕ್ತರಾಗಿ ಕೆಲಸ ಮಾಡಲಿದ್ದಾರೆ. ವಾರ್ಡ್‍ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸಲು ಇದೇ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆಡಳಿತಾತ್ಮಕವಾಗಿ ಹಲವಾರು ಮಹತ್ವದ ಬದಲಾವಣೆಗಳನ್ನು ಅಳವಡಿಸಲಾಗುತ್ತಿದ್ದು, ಇನ್ನು ಮುಂದೆ ಬೆಂಗಳೂರಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂಬ ನಿರೀಕ್ಷೆಗಳಿವೆ ಎಂದು ವರದಿಗಳು ತಿಳಿಸಿವೆ.

See also  ಬಿಯರ್ ಬಾಟಲ್ ಒಳಗೆ ಸಿಲುಕಿ ನಾಗರಹಾವು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು