ಬೆಂಗಳೂರು : ಕೊರೋನಾ ಕಾರಣದಿಂದಾಗಿ ಎಲ್ಲೆಡೆ ಹೆಚ್ಚುತ್ತಿರುವ ಬಾಲಕಾರ್ಮಿಕರ ಮೇಲಿನ ದೌರ್ಜನ್ಯವನ್ನು ತಡೆಯಲು ಹಾಗೂ ರಾಜ್ಯದಲ್ಲಿ ಈ ಪ್ರಕರಣಗಳು ಹೆಚ್ಚಾಗುವ ಭೀತಿಯಿಂದ ಹಾಗೂ ಮಕ್ಕಳ ಹಿತಾಸಕ್ತಿಯ ಕಾರಣದಿಂದ ರಾಜ್ಯದಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲೆಗಳನ್ನು ಪ್ರಾರಂಭಿಸಿರುವ ಸರ್ಕಾರ ಇದೀಗ ಆಕಾಶವಾಣಿ ಮೂಲಕ “ಕಲಿಯುತ್ತ ನಲಿಯೋಣ” ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸಚಿವ ಸುರೇಶ್ ಕುಮಾರ್, ಜನವರಿ 11ರಿಂದ ಏರ್ಟೆಲ್ 5ರವರೆಗೆ ಪ್ರತಿ ಸೋಮವಾರ 13 ಆಕಾಶವಾಣಿಯ ಕೇಂದ್ರಗಳಿಂದ ಕಲಿಯುತ್ತಾ ನಲಿಯೋಣ ಕಾರ್ಯಕ್ರಮ ಪ್ರಸಾರವಾಗಲಿದೆ ಒಂದರಿಂದ ನಾಲ್ಕನೇ ತರಗತಿಯ ಮಕ್ಕಳನ್ನು ಇಲ್ಲಿ ಕೇಂದ್ರಬಿಂದುವಾಗಿ ಆರಿಸಿಕೊಳ್ಳಲಾಗಿದೆ ಎಂದು ಹೇಳುತ್ತಾರೆ.
ಇದರೊಂದಿಗೆ ಒಂದರಿಂದ ನಾಲ್ಕನೇ ತರಗತಿಯವರೆಗೆ ಓದುತ್ತಿರುವ ಮಕ್ಕಳ ಎಲ್ಲಾ ಪೋಷಕರಿಗೆ ಈ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಆಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಬಹುದಾದರೆ ವಾಟ್ಸಾಪ್ ನಂಬರ್ 9449417612 ಗೆ ಕಳಿಸಿದರೆ ಅದನ್ನು ಪ್ರಸಾರ ಮಾಡಲಾಗುತ್ತದೆ.
ಕಾರ್ಯಕ್ರಮದ ಕುರಿತಾದ ವೇಳಾಪಟ್ಟಿ ಇಲ್ಲಿದೆ: ನಿತ್ಯ ಬೆಳಿಗ್ಗೆ 10 ರಿಂದ 10.15 ರವರೆಗೆ ಒಂದು ಮತ್ತು ಎರಡನೇ ತರಗತಿ, 10:15 ರಿಂದ 10.30 ರವರೆಗೆ 3 ಮತ್ತು 4ನೇ ತರಗತಿಗಳಿಗೆ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ ಇಲಾಖೆ ಇವುಗಳನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮಗಳು ಯೂಟ್ಯೂಬ್ ನಲ್ಲಿ ಸಹ ಲಭ್ಯವಿರುತ್ತವೆ ಎಂದು ಸಚಿವರು ತಿಳಿಸಿದ್ದಾರೆ.