ಬೆಂಗಳೂರು: ಜನವರಿ 12 ರಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ನಡೆಯಲಿದ್ದು, ಅದರಲ್ಲಿ ರಕ್ಷಾ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬರುತ್ತವೆ.
ಇನ್ನೂ ಇದೇ ವೇಳೆ ಜನವರಿ 12 ರಂದು ಆನ್ ಲೈನ್ ಚುನಾವಣೆ ನಡೆಸಬೇಕೆ ಅಥವಾ ಬೇಡವೇ ಎಂದು ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಗೊಂದಲದಲ್ಲಿದೆ, ಅಧ್ಯಕ್ಷ ಸ್ಥಾನಕ್ಕೆ ಮೊಹಮದ್ ನಲಪಾಡ್, ಎಚ್ ಎಸ್ ಮಂಜುನಾಥ್ ಸ್ಪರ್ಧಿಸಲು ಮುಂದಾಗಿದ್ದಾರೆ. ಮಿಥುನ್ ರೈ ಈಗಾಗಲೇ ನಾಮಪತ್ರ ವಾಪಸ್ ಪಡೆದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಇತರೆ ಹಿರಿಯ ಕೈ ನಾಯಕರು ಅಭ್ಯರ್ಥಿಗಳು ನಾಮಪತ್ರ ವಾಪಸ್ ತೆಗೆದುಕೊಳ್ಳಲು ಮನವೊಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.