ಕೋಲಾರ : ಮೆಡಿಕಲ್ ಕಾಲೇಜಿನ ಒಟ್ಟು 93 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದ್ದು, ಪ್ರತಿಷ್ಠಿತ ದೇವರಾಜ ಅರಸು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಎಂದು ವರದಿಗಳು ತಿಳಿಸಿವೆ.
ರೋಗ ಲಕ್ಷಣ ಕಂಡು ಬಂದಿರುವ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದ್ದು, ಇದುವರೆಗೂ ಒಟ್ಟು 503 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 93 ವಿದ್ಯಾರ್ಥಿಗಳಲ್ಲಿ ರೋಗ ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ, ಕೊರೋನಾ ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಂಡಿರುವುದಾಗಿ ವೈದ್ಯಕೀಯ ಕಾಲೇಜಿನ ಅಧಿಕಾರಿಗಳು ತಿಳಿಸಿದ್ದಾರೆ .