ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿ ಕೇಳಿಬಂದ ಹೆಸರು ಆದಿತ್ಯ ಆಳ್ವಾ. ಹಲವಾರು ವಾದ-ವಿವಾದ ಹಾಗೂ ತನಿಖೆಗಳ ನಂತರ ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಆದಿತ್ಯ ಆಳ್ವ ಅವರನ್ನು ಬಂಧಿಸಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ 6 ನೇ ಆರೋಪಿಯಾಗಿ ಆದಿತ್ಯ ಆಳ್ವಾ ಹೆಸರು ಕೇಳಿಬರುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಅಳ್ವಾ ನೆನ್ನೆ ರಾತ್ರಿ ಚೆನ್ನೈನಲ್ಲಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಸ್ತುತ ಚಾಮರಾಜನಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.