ಬೆಂಗಳೂರು: ಸುಳ್ಯ ಶಾಸಕ ಎಸ್. ಅಂಗಾರ, ಉಮೇಶ್ ಕತ್ತಿ, ಸಿ.ಪಿ.ಯೋಗೇಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರಗೇಶ್ ನಿರಾಣಿ ಅವರು ಇಂದು ಸಂಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದರು.
ಉಪಚುನಾವಣೆಯಲ್ಲಿ ಗೆದ್ದು ಬಂದಿರುವ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ. ಈ ಬಗ್ಗೆ ಪ್ರಶ್ನೆಗೆ ಉತ್ತರಿಸಲು ಯಡಿಯೂರಪ್ಪ ನಿರಾಕರಿಸಿದರು.