ಬೆಂಗಳೂರು: ಹಾವೇರಿಯಲ್ಲಿ ಫೆ.26ರಿಂದ 28ರ ತನಕ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡೊಡ್ಡರಂಗೇ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
ಲೇಖಕ, ಕವಿ ಹಾಗೂ ವಿಧಾನಪರಿಷತ್ ಸದಸ್ಯರಾಗಿರುವ ದೊಡ್ಡರಂಗೇಗೌಡ ಅವರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವರು ಎಂದು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಮನು ಬಳಿಗಾರ್ ಅವರು ತಿಳಿಸಿದರು.
ಸಾಹಿತ್ಯ ಸಮ್ಮೇಳನಕ್ಕೆ ಕೋವಿಡ್ ನಿಯಮಾವಳಿಗಳಿಂದ ರಿಯಾಯಿತಿ ನೀಡಬೇಕು ಎಂದು ನಾನು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ಈ ವರ್ಷ ಸಮ್ಮೇಳನವು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಬೇಕು ಎಂದು ಅವರು ಹೇಳಿದರು.