News Kannada
Friday, October 07 2022

ಬೆಂಗಳೂರು ನಗರ

2021-22ನೇ ಶೈಕ್ಷಣಿಕ ವರ್ಷವನ್ನು ಜುಲೈ 1ರಿಂದ ಆರಂಭ: ಶಿಕ್ಷಣ ಸಚಿವ ಸುರೇಶ್ ಕುಮಾರ್ - 1 min read

Photo Credit :

2021-22ನೇ ಶೈಕ್ಷಣಿಕ ವರ್ಷವನ್ನು ಜುಲೈ 1ರಿಂದ ಆರಂಭ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು : 2021-22ನೇ ಶೈಕ್ಷಣಿಕ ವರ್ಷವನ್ನು ಜುಲೈ 1ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಈಗಾಗಲೇ ಪ್ರಾರಂಭವಾಗಿದ್ದು, ಇತರೆ ತರಗತಿಗಳನ್ನು ಸಾಧ್ಯದಲ್ಲೇ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ, ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು ಎಂಬುದರ ಬಗ್ಗೆ ಈಗಾಗಲೇ ಹಲವಾರು ಮಾತುಗಳು ಕೇಳಿಬಂದಿದ್ದು, ಈ ಬಗ್ಗೆ ಆರೋಗ್ಯ ಹಾಗೂ ಶಿಕ್ಷಣ ತಜ್ಞರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಹಾಗೂ ಸದ್ಯದಲ್ಲೇ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಅರ್ಧ ದಿನದ ತರಗತಿಗಳನ್ನು, ದಿನವಿಡೀ ಆರಂಭಿಸಿಲು ತಯಾರಿ ನಡೆಸಲಾಗುವುದು ಎಂದರು.

ಇನ್ನು 2021-22ನೇ ಶೈಕ್ಷಣಿಕ ಸಾಲು ಜುಲೈ 1ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ಇದಕ್ಕೆ ಪೂರಕವಾದಂತಹ ತಯಾರಿಗಳನ್ನು ಈಗಾಗಲೇ ಆರಂಭಿಸಿದ್ದು, ಹಂತಹಂತವಾಗಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

See also  ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು