News Kannada
Sunday, October 02 2022

ಬೆಂಗಳೂರು ನಗರ

ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್‌: ಮಾಜಿ ಸಿಎಂ ಕುಮಾರಸ್ವಾಮಿ - 1 min read

Photo Credit :

ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್‌: ಮಾಜಿ ಸಿಎಂ ಕುಮಾರಸ್ವಾಮಿ

ಮೈಸೂರು : ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಗೊಂದಲ ಹಾಗೂ ಕೋಲಾಹಲದ ನಡುವೆ, ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್‌ ನಡೆದಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೊಸ ವರಸೆಯಲ್ಲಿ ಮಾತುಗಳನ್ನಾಡಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಿಕ್ಕಿರುವ ಮೂಲಗಳ ಮಾಹಿತಿ ಪ್ರಕಾರ ಕಳೆದ ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ ಇದ್ದಾರೆ. ಇದನ್ನು ತನಿಖೆ ಮಾಡಿಸುವ ಜವಾಬ್ದಾರಿ ಸರ್ಕಾರದ್ದು. ನಾನು ಈ ಪ್ರಕರಣ ನೋಡಿ ಖುಷಿ ಪಡುವವನಲ್ಲ. ಸರ್ಕಾರ ಬೀಳಿಸಿದರು ಎನ್ನುವ ಕಾರಣಕ್ಕೆ ನಾನು ಒಂದು ಕಲ್ಲು ಹೊಡೆಯಬೇಕು ಅಂತ ಹೊಡೆಯೋದಿಲ್ಲ ಎಂದರು.

ಇದೀಗ ಹಲವು ರೀತಿಯ ವ್ಯಾಖ್ಯಾನ ಶುರುವಾಗಿದೆ. ಪ್ರಕರಣ ಹಳ್ಳ ಹಿಡಿಯುವಂತದ್ದು ಏನು? ಆ ಸಚಿವರಿಂದ ರಾಜೀನಾಮೆ ಕೊಡಿಸಬೇಕೆಂಬ ಉದ್ದೇಶ ಇತ್ತು. ಇದೀಗಾ ರಾಜೀನಾಮೆ ಕೊಡಿಸುವಲ್ಲಿ ಅವರು ಸಫಲರಾಗಿದ್ದಾರೆ. ಇದೀಗಾ ಆ ಹೆಣ್ಣು ಮಗಳನ್ನು ಕಟ್ಟಿಕೊಂಡು ಅವರಿಗೆ ಏನು? ಅವರಿಬ್ಬರೇ ವಿಡಿಯೊ ಮಾಡಿಕೊಂಡಿದ್ದಾರೆ. ಆದರೆ, ಆ ವಿಡಿಯೊವನ್ನು ಹೊರಗೆ ಕೊಟ್ಟವರು ಯಾರು, ಗೊತ್ತಿಲ್ಲ? ಇಂತಹ ವಿಚಾರದಲ್ಲಿ ಸುಮ್ಮನೆ ಕಲ್ಲು ಹೊಡೆಯಬಾರದು ಎಂದು ತಿಳಿಸಿದರು.

See also  ಶಾಸಕ ಆನಂದ್ ಸಿಂಗ್ ಗೆ ಬೆದರಿಕೆ: ಕುಮಾರಸ್ವಾಮಿ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು