News Kannada
Sunday, November 27 2022

ಬೆಂಗಳೂರು ನಗರ

ಜಾರಕಿಹೊಳಿ ಸಿಡಿ ಪ್ರಕರಣ: ಪತ್ರಕರ್ತನ ಮನೆಯ ಮೇಲೆ ದಾಳಿ ನಡೆಸಿದ ಎಸ್ಐ ಟಿ ತಂಡ - 1 min read

Photo Credit :

ಜಾರಕಿಹೊಳಿ ಸಿಡಿ ಪ್ರಕರಣ: ಪತ್ರಕರ್ತನ ಮನೆಯ ಮೇಲೆ ದಾಳಿ ನಡೆಸಿದ ಎಸ್ಐ ಟಿ ತಂಡ

ಬೆಂಗಳೂರು : ರಾಜ್ಯದ ರಾಜಕೀಯ ವ್ಯವಸ್ಥೆಯಲ್ಲಿ ಗೊಂದಲಗಳನ್ನು ಹಾಗೂ ಗಲಭೆಗಳನ್ನು ಮೂಡಿಸಿದ್ದ ಜಾರಕಿಹೊಳಿ ಸಿರಿ ಪ್ರಕರಣ ತನಿಖೆ ಮುಂದುವರೆದಿದ್ದು, ಪ್ರಕರಣದ ಪ್ರಮುಖ ಸೂತ್ರಧಾರ ಎಂದು ಶಂಕಿಸಲಾದ ಪತ್ರಕರ್ತನ ಮನೆಯ ಮೇಲೆ ಎಸ್ ಐ ಟಿ ತಂಡ ದಾಳಿ ನಡೆಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತನೊಬ್ಬನ ಮನೆ ಮೇಲೆ ದಾಳಿ ನಡೆಸಿದ ಎಸ್ ಐ ಟಿ ತಂಡ ಮಹತ್ವದ ದಾಖಲೆ ವಶಪಡಿಸಿಕೊಂಡಿದೆ . ಸುಮಾರು 18 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿರುವ ದಾಖಲೆ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ . ರಮೇಶ್ ಜಾರಕಿಹೊಳಿ ಹೊರತಾಗಿ ಕಾಂಗ್ರೆಸ್ ಪಕ್ಷದ ಕೆಲವು ಪ್ರಮುಖ ನಾಯಕರನ್ನು ಕೂಡ ಈ ಜಾಲ ಟಾರ್ಗೆಟ್ ಮಾಡಿತ್ತು ಎಂಬ ವರದಿಗಳು ಹರಿದಾಡುತ್ತಿವೆ .

ಇನ್ನೊಂದೆಡೆ, ಸಿ ಡಿ.ಯಲ್ಲಿ ಕಾಣಿಸಿಕೊಂಡಿರುವ ಯುವತಿ ಬೆಂಗಳೂರಿನಲ್ಲಿ ವಾಸವಾಗಿದ್ದ ಪಿ ಜಿ ಮೇಲೆ ಕೂಡ ಪೊಲೀಸ್ ತಂಡ ದಾಳಿ ನಡೆಸಿದೆ . ಮನೆ ಮಾಲೀಕನ ಬಳಿ ಮಾಹಿತಿ ಕಲೆ ಹಾಕಿದೆ ಎಂದು ವರದಿಗಳು ತಿಳಿಸಿವೆ.

See also  ಕಾಶ್ಮೀರದಲ್ಲಿ ಕರ್ನಾಟಕ ಭವನ ಸ್ಥಾಪನೆಯ ಅಗತ್ಯವಿದೆ: ಗೃಹ ಸಚಿವ ಅರಗ ಜ್ಞಾನೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು