News Kannada
Thursday, December 01 2022

ಬೆಂಗಳೂರು ನಗರ

ರಾಜ್ಯದಲ್ಲಿ ಕೊರೋನ ಹೆಚ್ಚಳ, ಮುಂಜಾಗ್ರತಾ ಕ್ರಮದ ಕುರಿತು ಸಚಿವ ಸುಧಾಕರ್ ಸ್ಪಷ್ಟನೆ

Photo Credit :

ರಾಜ್ಯದಲ್ಲಿ ಕೊರೋನ ಹೆಚ್ಚಳ, ಮುಂಜಾಗ್ರತಾ ಕ್ರಮದ ಕುರಿತು ಸಚಿವ ಸುಧಾಕರ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ವೈರಸ್ ಸೋಂಕು ಆತಂಕಾರಿಯಾಗುವ ಮಟ್ಟದಲ್ಲಿ ಹರಡುತ್ತಿದೆ. ಇದು ರೂಪಾಂತರಿ ಕೊರೋನಾ ಎಂಬುದು ನಿಶ್ಚಿತ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿಯಲ್ಲಿ ಈ ವೈರಸ್ ಹರಡುವ ವೇಗ ಬಹಳ ಹೆಚ್ಚಿದ್ದು, ಸಾವಿನ ಪ್ರಕರಣ ಕಡಿಮೆ ಇದೆ. ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ನಿಶ್ಚಿತ. ಪ್ರಸ್ತುತ ಇರುವ ನಮ್ಮ ಆಸ್ಪತ್ರೆಗಳ ಸಾಮರ್ಥ್ಯದಲ್ಲಿ ಪರಿಸ್ಥಿತಿ ನಿಭಾಯಿಸುವುದು ಕಷ್ಟವಾಗುತ್ತದೆ. ಅನ್ಯ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರು ಹಾಗು ಬೆಂಗಳೂರು ನಗರ ಪ್ರವೇಶಕ್ಕೆ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಬೇಕಾದು ಅನಿವಾರ್ಯವೆನಿಸಿದೆ. ತಾಂತ್ರಿಕ ಸಲಹಾ ಸಮಿತಿಯೂ ಇದೇ ರೀತಿಯ ಸಲಹೆ ಮಾಡಿರುವುದಾಗಿ ಸುಧಾಕರ್ ಹೇಳಿದರು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದರಿಂದ ಒಂಭತ್ತನೆಯ ತರಗತಿವರೆಗೆ ಪರೀಕ್ಷೆಯೇ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸಿಎಂ, ಶಿಕ್ಷಣ ಸಚಿವರು, ಗೃಹ ಸಚಿವರು ಕಂದಾಯ ಸಚಿವರೊಂದಿಗೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸುವುದಾಗಿ ಸಚಿವರು ತಿಳಿಸಿದರು.

See also  ಶಿವಾಜಿ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣ: ಏಳು ಮಂದಿ ಆರೋಪಿಗಳ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು