News Kannada
Thursday, December 01 2022

ಬೆಂಗಳೂರು ನಗರ

ಮೊದಲ ಬಾರಿಗೆ ಸಿಡಿ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ - 1 min read

Photo Credit :

ಮೊದಲ ಬಾರಿಗೆ ಸಿಡಿ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಳಗಾವಿ: ರಾಜ್ಯದಲ್ಲಿ ಹಲವಾರು ಗೊಂದಲಗಳನ್ನು ಎಬ್ಬಿಸಿರುವ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಅವರು ಇದರಲ್ಲಿ ಎಸ್‌ಐಟಿ ಸಂಪೂರ್ಣ ನಿಷ್ಪಕ್ಷಪಾತ ತನಿಖೆ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪೊಲೀಸ್ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ನವರು ಇದರಲ್ಲಿ ದುರುದ್ದೇಶದ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಸಿಡಿ ಪ್ರಕರಣದ ಕುರಿತು ತಮ್ಮ ಮೌನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೌನವಾಗಿರುವ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನಾನು ಪ್ರತಿದಿನ ಗೃಹ ಸಚಿವರಿಂದ ಇದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಎಲ್ಲವೂ ಕಾನೂನಿನ ಚೌಕಟ್ಟಿನಲ್ಲಿ ಹಾಗೂ ನಿಷ್ಪಕ್ಷಪಾತವಾಗಿ ನಡೆದಿದೆ. ಸಿದ್ದರಾಮಯ್ಯ ಅವರು ಜವಾಬ್ದಾರಿ ಸ್ಥಾನದಲ್ಲಿದ್ದು ಅದಕ್ಕೆ ತಕ್ಕಂತೆ ಮಾತನಾಡಬೇಕು ಎಂದು ತಿರುಗೇಟು ನೀಡಿದರು.

ಅಷ್ಟೇ ಅಲ್ಲದೆ, ಈ ಪ್ರಕರಣದಲ್ಲಿ ರಮೇಶ ಜಾರಕಿಹೊಳಿ ನಿರಪರಾಧಿಯಾಗಿ ಹೊರಬರುತ್ತಾರೆ. ಅವರಿಗೆ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಹೇಳಿದ್ದೇನೆ ಎಂದರು.

See also  ಆರ್ ಎಸ್ ಎಸ್ ಬಗ್ಗೆ ಈಗ ಚರ್ಚೆ ಮಾಡುವುದು ಅಪ್ರಸ್ತುತ : ಹೆಚ್ ಡಿಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು