News Kannada
Wednesday, December 07 2022

ಬೆಂಗಳೂರು ನಗರ

ಬದಲಾದ ವಿದ್ಯಾಗಮ ಶಿಕ್ಷಣ ಪದ್ಧತಿ

Photo Credit :

ಬದಲಾದ ವಿದ್ಯಾಗಮ ಶಿಕ್ಷಣ ಪದ್ಧತಿ

ಬೆಂಗಳೂರು : ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿದ್ಯಾಗಮ ಮತ್ತು ನೇರ ತರಗತಿಯನ್ನು ಸರಕಾರ ಸ್ಥಗಿತಗೊಳಿಸಿತ್ತು. ಬಳಿಕ ಮನೆ ಮನೆಗೆ ಭೇಟಿ ನೀಡಿ ಪಾಠ ಕಲಿಸಲು ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಮೂಲಕ ವಿದ್ಯಾಗಮವನ್ನು ಹೊಸ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕರಿಗೆ ಹಾಗು ಕ್ಲಸ್ಟರ್‌ಗಳ ಸಿಆರ್‌ಪಿಗಳಿಗೆ ಈ ಬಗ್ಗೆ ಜ್ಞಾಪನ ಪತ್ರ ಕಳುಹಿಸಿದ್ದಾರೆ.

1ರಿಂದ 5ನೇ ತರಗತಿಯ ಮಕ್ಕಳಿಗೆ ವಿದ್ಯಾಗಮದಂತೆ ಮನೆ ಮನೆಗೆ ಭೇಟಿ ನೀಡಬೇಕು. ಅಭ್ಯಾಸ ಹಾಳೆಯನ್ನು ನೀಡಿ ಕಲಿಕೆಯ ಅವಲೋಕನ ನಡೆಸಬೇಕು. 6ರಿಂದ 9ನೇ ತರಗತಿಗಳಿಗೆ ಎ.28ರ ವರೆಗೆ ನೇರ ತರಗತಿ ಸ್ಥಗಿತಗೊಳಿಸಲಾಗಿದ್ದು, ಈ ಅವಧಿಯಲ್ಲಿ ಮಕ್ಕಳ ಜತೆಗೆ ನಿರಂತರ ಸಂಪರ್ಕದಲ್ಲಿರಬೇಕು. ಈ ಮೂಲಕ ಮಕ್ಕಳು ಕಲಿಕೆಯನ್ನು ಮುಂದುವರಿಸಲು ಪ್ರೇರೇಪಣೆ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಹಿಂದೆ ಮಕ್ಕಳ ಜತೆಗೆ ಶಿಕ್ಷಕರು ನೇರ ಸಂಪರ್ಕದಲ್ಲಿದ್ದದರಿಂದ ಕೊರೊನಾ ಹೆಚ್ಚಿದ ಕಾರಣ ವಿದ್ಯಾಗಮವನ್ನು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಈಗ ಮತ್ತೆ ವಿದ್ಯಾಗಮಾವನ್ನು ಜಾರಿಗೆ ತರುವುದು ಸರಿಯಲ್ಲ. ಜತೆಗೆ, ಒಂದೊಂದು ಜಿಲ್ಲೆಗೆ ಒಂದೊಂದು ನೀತಿ ಎಂಬಂತಾಗಿದೆ. ಸರಕಾರ ತರಗತಿ, ವಿದ್ಯಾಗಮ ಸ್ಥಗಿತಗೊಳಿಸಲು ನೀಡಿದ ಆದೇಶಕ್ಕೆ ಬೆಲೆ ಇಲ್ಲವೇ ಎಂದು ಶಿಕ್ಷಕರು ಪ್ರಶ್ನಿಸಿದ್ದಾರೆ.

See also  ತಜ್ಞರ ಜತೆ ಚರ್ಚಿಸಿ ತಜ್ಞರ ಸಲಹೆಯಂತೆ ಸಡಿಲಿಕೆ ಬಗ್ಗೆ ಕ್ರಮ ತೆಗೆದುಕೊಳ್ಳುತೇವೆ : ಸಿಎಂ ಬಸವರಾಜ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು