News Kannada
Friday, December 02 2022

ಬೆಂಗಳೂರು ನಗರ

ಆರನೇ ವೇತನ ಆಯೋಗ ಶಿಫಾರಸು ಜಾರಿಗೊಳಿಸಲು ಸಾಧ್ಯವಿಲ್ಲ: ಬಿಎಸ್ ವೈ ಸ್ಪಷ್ಟನೆ

Photo Credit :

ಆರನೇ ವೇತನ ಆಯೋಗ ಶಿಫಾರಸು ಜಾರಿಗೊಳಿಸಲು ಸಾಧ್ಯವಿಲ್ಲ: ಬಿಎಸ್ ವೈ ಸ್ಪಷ್ಟನೆ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ನೌಕರರಿಗೆ ಆರನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಸ್ತುತದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ‌ ಆಯೋಗದ ಶಿಫಾರಸು ಜಾರಿ ಸಾಧ್ಯವೇ ಇಲ್ಲ. ಈಗಾಗಲೇ ಈ ಕುರಿತು ಸ್ಪಷ್ಟವಾಗಿ ಹೇಳಲಾಗಿದ್ದು, ಈಗಲೂ ಹಠ ಮಾಡುವುದು ಸರಿಯಲ್ಲ. ಈಗಾಗಲಾದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಾರಿಗೆ ನೌಕರರು ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ನಡೆದುಕೊಳ್ಳಬೇಕು. ಅವರ ಕರ್ತವ್ಯಗಳನ್ನು ಅರ್ಥಮಾಡಿಕೊಂಡು ಕೆಲಸಕ್ಕೆ ಹಾಜರಾಗಬೇಕು. ಇವತ್ತಿನಿಂದ ನಿಮ್ಮ ಬಸ್‌ಗಳನ್ನು ಓಡಾಡಿಸೋಕೆ ಶುರು ಮಾಡಿ. ಕೋವಿಡ್ ಕಾರಣದಿಂದ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿರುವಾಗ ಈ ರೀತಿ ಹಠ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ವಿನಂತಿಸಿಕೊಂಡಿದ್ದಾರೆ.

ಆದಾಯದಲ್ಲಿ ಶೇ 85ರಷ್ಟು ಭಾಗ ಸರ್ಕಾರಿ ನೌಕರಿಗೆ ವೇತನ, ಪಿಂಚಣಿ ಸೇರಿದಂತೆ ಇತರ ಯೋಜನೇತರ ವೆಚ್ಚಗಳಿಗೆ ಖರ್ಚಾಗುತ್ತಿದೆ. ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಹಠಕ್ಕೆ ಬೀಳಬಾರದು. ಈಗಾಗಲೇ 9 ಬೇಡಿಕೆಗಳಲ್ಲಿ‌ 8 ಬೇಡಿಕೆ ಈಡೇರಿಸಿದ್ದೇವೆ. ಅದರಲ್ಲಿ ಲೋಪದೋಷ ಇದ್ದರೆ ಹೇಳಿ, ಸರಿಪಡಿಸೋಣ. ಅದನ್ನು ಬಿಟ್ಟು ಯಾರದ್ದೋ ಮಾತಿಗೆ ಬಲಿಯಾಗಿ ಈ ರೀತಿ ಹಠ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯ ಸರ್ಕಾರ ಸಾರಿಗೆ ನೌಕರರ ಪಟ್ಟು ಬಿಡದ ಹಠದಿಂದ ಪ್ರಯಾಣಿಕರು ಮಾತ್ರ ನಿತ್ಯವೂ ಕಷ್ಟಪಡುವಂತಾಗಿದೆ.

See also  ಕರ್ನಾಟಕಕ್ಕೆ ಬರೋಬ್ಬರಿ 44 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು