News Kannada
Friday, December 09 2022

ಬೆಂಗಳೂರು ನಗರ

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯಗೆ ಕೊರೋನಾ ಸೋಂಕು!

Photo Credit :

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯಗೆ ಕೊರೋನಾ ಸೋಂಕು!

ಬೆಂಗಳೂರು ; ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ. ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ತಗುಲಿತ್ತು. ಇದಾದ ಎರಡೇ ದಿನಕ್ಕೆ ಇದೀಗ ಮಾಜಿ ಸಚಿವ, ಹೊನ್ನಾಳಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಅವರೀಗ ಮನೆಯಲ್ಲೇ ಐಸೊಲೇಷನ್​ ಆಗಿದ್ದು, ತನ್ನ ಜೊತೆಗಿದ್ದವರೂ ಸಹ ಕೊರೋನಾ ಪರೀಕ್ಷೆ ಮಾಡಿಕೊಳ್ಳಿ, ಮುಂಜಾಗ್ರತೆ ವಹಿಸಿ ಎಂದು ವಿನಂತಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಎಂ.ಪಿ. ರೇಣುಕಾಚಾರ್ಯ, “ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಐಸೋಲೇಶನ್ ಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ” ಎಂದಿದ್ದಾರೆ.ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಐಸೋಲೇಶನ್ ಗೆ ಒಳಗಾಗಿದ್ದೇನೆ.
ಭಾನುವಾರವಾದ ಇಂದು ರಾಜ್ಯದಲ್ಲಿ ಕರೋನಾ ರೌದ್ರಾವತಾರ ತಾಳಿದೆ. ನಿತ್ಯ ತನ್ನದೇ ದಾಖಲೆಗಳನ್ನು ಮುರಿದು ಹೊಸ ದಾಖಲೆಯನ್ನು ಸೃಷ್ಟಿಸುತ್ತಿದೆ. ಒಂದೇ ದಿನ ಪಾಸಿಟಿವ್ ಕೇಸ್ಗಳ ಸಂಖ್ಯೆ 20 ಸಾವಿರದ ಸಮೀಪದಲ್ಲಿದೆ. ರಾಜ್ಯದಲ್ಲಿಂದು ಬರೋಬ್ಬರಿ 19,067 ಮಂದಿಯ ಕೋವಿಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದು, 81 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 12,793 ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಬೆಂಗಳೂರಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 60 ಮಂದಿ ಸಾವಿನ ಮನೆ ಸೇರಿದ್ದಾರೆ. ಚಿತಾಗಾರಗಳ ಮುಂದೆ ಹೆಣಗಳ ಸಾಲು ತಗ್ಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ.
24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಪಾಸಿಟಿವ್ ಕೇಸ್​ಗಳ ಸಂಖ್ಯೆ 20 ಸಾವಿರದ ಸನಿಹದಲ್ಲಿದ್ದರೆ ಗುಣಮುಖರಾದವರ ಸಂಖ್ಯೆ ಕೇವಲ 4,603. 620 ಮಂದಿ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಕೇಸ್ಗಳ ಸಂಖ್ಯೆ 11,61,065ಕ್ಕೆ ಏರಿಕೆಯಾಗಿದ್ದರೆ, 1,33,543 ಸಕ್ರಿಯ ಪ್ರಕರಣಗಳಿವೆ. ಈವರೆಗೆ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 13,351ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಈವರೆಗೆ ಸೋಂಕಿನಿಂದ 5,123 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿಂದು ದಾಖಲೆಯ ಪ್ರಮಾಣದಲ್ಲಿ ಕೊರೋನಾ ಕೇಸ್ಗಳು ಪತ್ತೆಯಾಗಿದ್ದರೂ ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಸಾವಿರಕ್ಕಿಂತ ಹೆಚ್ಚು ಕೇಸ್ಗಳು ದಾಖಲಾಗಿಲ್ಲ. ಬೆಂಗಳೂರಲ್ಲಿ ಇಂದು 12,793 ಪಾಸಿಟಿವ್ ಕೇಸ್ಗಳು ದಾಖಲಾಗಿವೆ. ಆದರೆ ಉಳಿದ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್ಗಳ ಸಂಖ್ಯೆ ಸಾವಿರ ದಾಟಿಲ್ಲ. ಬೆಂಗಳೂರು ನಗರ ನಂತರದಲ್ಲಿ ಮೈಸೂರು ಜಿಲ್ಲೆಯಲ್ಲಿ 777 ಕೇಸ್ಗಳು ದಾಖಲಾಗಿವೆ. ಕಲಬುರಗಿಯಲ್ಲಿ 671, ತುಮಕೂರಲ್ಲಿ 494, ಬೀದರ್ನಲ್ಲಿ 469, ಹಾಸನದಲ್ಲಿ 348, ಮಂಡ್ಯದಲ್ಲಿ 338, ಧಾರವಾಡದಲ್ಲಿ 265, ಬಳ್ಳಾರಿಯಲ್ಲಿ 238 ಪಾಸಿಟಿವ್ ಕೇಸ್ಗಳು ದಾಖಲಾಗಿವೆ.
ಬೆಂಗಳೂರಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾಗೆ ಕಡಿವಾಣ ಹಾಕಲು ನಾಳೆಯಿಂದ ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿರುವ ಸರ್ಕಾರ ಇಂದು ಪೂರ್ವಭಾವಿ ಸಭೆ ನಡೆಸಿತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಕುಮಾರಕೃಪ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ಮಾಡಿ ಚರ್ಚೆ ನಡೆಸಿದರು.
ಬೆಂಗಳೂರಲ್ಲಿ ಯಾವುದೇ ಕಾರಣಕ್ಕೂ ಲಾಕ್ಡೌನ್ ಇಲ್ಲ ಎಂದು ಸಚಿವ ಆರ್. ಅಶೋಕ್ ಸ್ಪಷ್ಟನೆ ನೀಡಿದರು. ನಾಳೆ ಬೆಂಗಳೂರಿಗೆ ವಿಶೇಷ ಮಾರ್ಗಸೂಚಿ ಹೊರಡಿಸುತ್ತೇವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಮಾರ್ಗಸೂಚಿ ಹೊರಡಿಸುತ್ತೇವೆ. ನೈಟ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಸಿಎಂ ತೀರ್ಮಾನಿಸುತ್ತಾರೆ ಎಂದು ತಿಳಿಸಿದರು.

See also  ಕಾಂಗ್ರೆಸ್ ನವರು ಬುರುಡೆ ಬಿಡುವುದರಲ್ಲಿ ನಂಬರ್ ಒನ್: ಡಿ.ವಿ.ಸದಾನಂದ ಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು