ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಅನೇಕ ಕೊರೋನ ನಿಯಂತ್ರಣ ಕೆಲಸಗಳು ನಡೆಯುತ್ತಿದ್ದು, ಕೊರೋನಾ ತಡೆಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿ ಮೋದಿಗೆ ಸಮಗ್ರ ಮಾಹಿತಿ ನೀಡಿದ್ದಾರೆ .
ರಾಜ್ಯದಲ್ಲಿ ಘೋಷಿಸಲಾಗಿರುವ ವೀಕೆಂಡ್ ಲೌಕ್ ಡಾನ್ ಮತ್ತು ಇತರ ಕ್ರಮಗಳ ಕುರಿತು ಸಿಎಂ ಮಾಹಿತಿ ನೀಡಿದ್ದಾರೆ . ಮುಂದಿನ ದಿನಗಳಲ್ಲಿ ಒಂದು ಕೋಟಿ ಲಸಿಕೆ ಖರೀದಿ ಕುರಿತು ಅವರು ಪ್ರಧಾನಿ ಅವರ ಗಮನಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದೇ ವೇಳೆ ರಾಜ್ಯಕ್ಕೆ ಹೆಚ್ಚುವರಿಯಾಗಿ ಆಕ್ಸಿಜನ್ ಪೂರೈಸುವಂತೆ ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.