News Kannada
Monday, October 03 2022

ಬೆಂಗಳೂರು ನಗರ

ಬೆಡ್ ಬ್ಲಾಕಿಂಗ್ ಹಗರಣ; ಇಬ್ಬರು ವೈದ್ಯರು ಸೇರಿದಂತೆ ಏಳು ಜನರು ಪೊಲೀಸರ ವಶಕ್ಕೆ - 1 min read

Photo Credit :

ಬೆಡ್ ಬ್ಲಾಕಿಂಗ್ ಹಗರಣ; ಇಬ್ಬರು ವೈದ್ಯರು ಸೇರಿದಂತೆ ಏಳು ಜನರು ಪೊಲೀಸರ ವಶಕ್ಕೆ

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣಗೆ ಒಳಪಡಿಸಿದ್ದಾರೆ. ಬೆಡ್ ಬ್ಲಾಕಿಂಗ್ ಪ್ರಕರಣವನ್ನು ಸರ್ಕಾರ ಸಿಸಿಬಿ ತನಿಖೆಗೆ ವಹಿಸುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು ಇದುವರೆಗೂ 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಈ ಸಂಜೆಗೆ ತಿಳಿಸಿದ್ದಾರೆ.

ಬೆಡ್ ಬ್ಲಾಕಿಂಗ್ ಪ್ರಕರಣ ಕುರಿತಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ದಕ್ಷಿಣ ವಿಭಾಗದ ಪೊಲೀಸರು ನಿನ್ನೆ ನೇತ್ರಾವತಿ ಮತ್ತು ರೋಹಿತ್ ಎಂಬುವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇಂದು ಸಿಸಿಬಿ ಪೊಲೀಸರು ನಗರದ ಎಂಟು ವಲಯಗಳಲ್ಲಿ ಸ್ಥಾಪಿಸಿರುವ ವಾರ್ ರೂಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಇಬ್ಬರು ವೈದ್ಯರು ಸೇರಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಹಗರಣದಲ್ಲಿ ಭಾಗಿಯಾಗಿರುವ ಇನ್ನಿತರ ಕೆಲವರು ತಮ್ಮ ಮೋಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ ಅವರ ಬಂಧನಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದರು.

ಈ ಹಗರಣದಲ್ಲಿ ಭಾಗಿಯಾದವರು ಎಷ್ಟೆ ಪ್ರಭಾವಿಗಳಾಗಿರಲಿ ಇಲ್ಲವೇ ಎಂತಹ ಹಿರಿಯ ಅಧಿಕಾರಿಗಳೇ ಆಗಿರಲ್ಲಿ ಅವರನ್ನು ಪತ್ತೆ ಹಚ್ಚಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ.

See also  ಮಣ್ಣಿನ ಮಗನಿಗೆ 85ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು