News Kannada
Friday, September 30 2022

ಬೆಂಗಳೂರು ನಗರ

ದಾಳಿ ಬಳಿಕ ಅಮಾನತುಗೊಂಡಿದ್ದ 17 ಮಂದಿ ಮುಸ್ಲಿಂ ನೌಕರರು ಮರುನೇಮಕ - 1 min read

Photo Credit :

ದಾಳಿ ಬಳಿಕ ಅಮಾನತುಗೊಂಡಿದ್ದ 17 ಮಂದಿ ಮುಸ್ಲಿಂ ನೌಕರರು ಮರುನೇಮಕ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಮತ್ತು ಮೂವರು ಶಾಸಕರು ಮೇ 4ರಂದು ಕೋವಿಡ್‌ ವಾರ್‌ ರೂಂ ಮೇಲೆ ದಾಳಿ ನಡೆಸಿದ ನಂತರ ಅಮಾನತುಗೊಂಡಿದ್ದ 17 ಮಂದಿ ಮುಸ್ಲಿಂ ನೌಕರರು ಸೋಮವಾರದಿಂದ(ಮೇ 10) ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.ಬಿಬಿಎಂಪಿಯಲ್ಲಿ ಹಾಸಿಗೆ ಬ್ಲಾಕಿಂಗ್‌ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಸಂಸದ ಮತ್ತು ಶಾಸಕರು ಈ ನೌಕರರ ವಿರುದ್ಧ ಹರಿಹಾಯ್ದಿದ್ದರು. ವಾರ್‌ ರೂಂನಲ್ಲಿ 212 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಮುಸ್ಲಿಂ ಸಮುದಾಯದ ಒಬ್ಬರು ಮಾತ್ರ ಹಾಸಿಗೆ ನಿಯೋಜನೆ ವಿಭಾಗದಲ್ಲಿದ್ದರು. ಕ್ರಿಸ್ಟಲ್‌ ಇನ್ಫೋ ಸಿಸ್ಟಂ ಅಂಡ್‌ ಸರ್ವೀಸಸ್‌ ಎಂಬ ಹೊರಗುತ್ತಿಗೆ ಸಂಸ್ಥೆ ಈ ನೌಕರರನ್ನು ಬಿಬಿಎಂಪಿಗೆ ಪೂರೈಸಿತ್ತು.
ಈ ಸಂಸ್ಥೆಯ ಅಧಿಕಾರಿಗಳು, ಕೋವಿಡ್‌ ದಕ್ಷಿಣ ವಲಯ ವಾರ್‌ ರೂಂನ ಉಸ್ತುವಾರಿ, ಐಎಎಸ್‌ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ಶನಿವಾರ ಭೇಟಿ ಮಾಡಿದ್ದು, ‘ಈ ಮುಸ್ಲಿಂ ನೌಕರರು ಹಾಸಿಗೆ ಬ್ಲಾಕಿಂಗ್‌ ದಂಧೆಯಲ್ಲಿ ಪಾಲ್ಗೊಂಡಿಲ್ಲ. ಇವರನ್ನು ಮರುನೇಮಕ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ. ಈ ನಡುವೆ, ‘17 ಮುಸ್ಲಿಂ ನೌಕರರನ್ನು ಮತ್ತೆ ನೇಮಿಸಿಕೊಳ್ಳಲಾಗುವುದು. ಸೋಮವಾರದಿಂದಲೇ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ’ ಎಂದು ತುಳಸಿ ಮದ್ದಿನೇನಿ ತಿಳಿಸಿದ್ದಾರೆ.

 

See also  ಹೆಣ್ಣಿನ ಕಾಲ್ಗುಣ ಸರಿಯಿಲ್ಲ ಎಂದ ವರ: ವಧು ನೇಣಿಗೆ ಶರಣು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು