ಬೆಂಗಳೂರು: ಸರಕಾರವು ಕೋವಿಡ್ ಸಾವಿನ ಲೆಕ್ಕವನ್ನು ಮುಚ್ಚಿಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಅರೋಪ ಅಸತ್ಯದಿಂದ ಕೂಡಿದೆ. ಪ್ರತಿ ಸೋಂಕಿತನ ಬಗ್ಗೆಯೂ ಮಾಹಿತಿ ಇದೆ. ಯಾರಾದರೂ ಸಾವನ್ನಪ್ಪಿದರೆ ಆ ಮಾಹಿತಿಯೂ ವಿವಿಧ ಹಂತಗಳಲ್ಲಿ ದಾಖಲಾಗುತ್ತಿದೆ ಎಂದರು.
ಚಿತ್ರರಂಗದ ಪೋಷಕ ಕಲಾವಿದರಿಗೆ ಭರತ್ಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಫುಡ್ ಕಿಟ್ ವಿತರಿಸಿದ ಬಳಿಕ ಮಾತನಾಡಿದ ಅವರು, ಇದೆಲ್ಲವನ್ನು ಬಹಳ ವ್ಯವಸ್ಥಿತವಾಗಿ ಮಾಡಲಾಗುತ್ತಿದ್ದು, ಸಿದ್ದರಾಮಯ್ಯ ಅವರು ಮಾಡಿರುವ ಆರೋಪದಲ್ಲಿ ಹುರಳಿಲ್ಲ. ಜನರಲ್ಲಿ ಗೊಂದಲ ಉಂಟು ಮಾಡುವುದು ಬೇಡ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.
ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೂ ಲಸಿಕೆ ಅಭಾವ ಇದೆ ಎನ್ನುವುದು ನಿಜ. ಆದರೆ, ಸರಕಾರ ಉತ್ಪಾದಕರಿಂದ ಲಸಿಕೆ ಪಡೆದು ಜನರಿಗೆ ನೀಡಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಹಂತ ಹಂತವಾಗಿ ಲಭ್ಯವಾಗುತ್ತಿರುವ ಲಸಿಕೆಯನ್ನು ಆಗಿಂದಾಗ್ಗೆ ಕೊಡಲಾಗುತ್ತಿದೆ. ಆದ್ಯತೆಯ ಮೇರೆಗೆ ಯಾರಿಗೆ ಕೋಡಬೇಕೋ ಅವರಿಗೆ ಕೊಡಲಾಗುತ್ತಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.