ಬೆಂಗಳೂರು : ಪಿಯುಸಿ ಪರೀಕ್ಷೆ ರದ್ದಾಗಿರುವ ಬೆನ್ನಲ್ಲೇ ಅಂಕಗಳ ವಿತರಣೆಯ ಕುರಿತು ವಿದ್ಯಾರ್ಥಿಗಳಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್. ವಿದ್ಯಾರ್ಥಿಗಳಿಗೆ ಅಂಕ ನೀಡುವ ವೇಳೆ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳನ್ನು ಕೂಡ ಒಂದು ಮಾನದಂಡವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ .
ಈ ಆಲೋಚನೆಯಿಂದಾಗಿ ವಿದ್ಯಾರ್ಥಿಗಳಿಗೆ ನೆರವಾಗಲಿದೆ ಎಂದು ಅಭಿಪ್ರಾಯಪಡಲಾಗಿದೆ .ಇನ್ನು ಮೆಡಿಕಲ್ ಮತ್ತು ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಣೆ ವೇಳೆ ಪಿಯುಸಿ ಪರೀಕ್ಷೆಯನ್ನು ಪರಿಗಣಿಸದಂತೆ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ . ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರಿಗೆ ಸುರೇಶ್ ಕುಮಾರ್ ಪತ್ರದ ಮೂಲಕ ಈ ಮನವಿ ಮಾಡಿದ್ದಾರೆ . ಇದೇ ವೇಳೆ ಜೂನ್ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಲಾಗಿದೆ