News Kannada
Sunday, September 25 2022

ಬೆಂಗಳೂರು ನಗರ

ಡಿಕೆಶಿ ವಿರುದ್ಧ ತಿರುಗಿ ಬಿದ್ದ ಹೆಚ್ಡಿಕೆ - 1 min read

Photo Credit :

ಬೆಂಗಳೂರು: ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ. ಸಿ. ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು  ಸರಣಿ ಟ್ವೀಟ್ ಮಾಡಿರುವ ಅವರು, ಡಿ.ಕೆ. ಶಿವಕುಮಾರ್ ಅಪ್ಪಟ ಸುಳ್ಳು ಹೇಳುತ್ತಿದ್ದಾರೆಂದು ಕಟುವಾಗಿ ಟೀಕಿಸಿದ್ದಾರೆ.

ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ಅನೈತಿಕ ಎಂಬುವುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಪ್ಪಟ ಸುಳ್ಳು ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ದಿವಂಗತ ನಾಯಕ ಎಂಸಿ ಮನಗೂಳಿ ನಿಧನರಾಗುವುದಕ್ಕೆ 15 ದಿನ ಮೊದಲು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ. ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ, ಕೊವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.

ಜನವರಿ 9 ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28 ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳು ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

See also  ನೈತಿಕ ಪೊಲೀಸ್ ಗಿರಿ ಸಮರ್ಥನೆ, ಸಿಎಂ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು