ರಾಜ್ಯದಲ್ಲಿ ಕೋವಿಡ್ ಲಸಿಕೀಕರಣ ಭರದಿಂದ ಮುಂದುವರೆದಿದ್ದು, ಈವರೆಗೂ 7 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.
4,36,88,616 ಮಂದಿ ಮೊದಲ ಡೋಸ್ ನ ಕೋವಿಡ್ ಲಸಿಕೆ ಪಡೆದಿದ್ದು, 2,65,45,156 ಜನರು ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಈ ಮೂಲಕ ಶೇ.90ರಷ್ಟು ಜನರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ.
ಏಳು ಕೋಟಿ ಕೋವಿಡ್ ಲಸಿಕೆ ನೀಡುವ ಮೂಲಕ ರಾಜ್ಯ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಯಾವುದೇ ಹಿಂಜರಿಕೆಯಿಲ್ಲದೆ ಎರಡನೇ ಡೋಸ್ ಅನ್ನು ತೆಗೆದುಕೊಳ್ಳಲು ಮುಂದೆ ಬರಲು ಆರೋಗ್ಯದ ಸಚಿವ ಸುಧಾಕರ್ ವಿನಂತಿಸಿದ್ದಾರೆ. ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಬೂಸ್ಟರ್ ಡೋಸ್ ಅನ್ನು ನೀಡಲು ಸರ್ಕಾರ ಮುಂದಾಗಿದೆ.