ಬೆಂಗಳೂರು : ನಗರದ ಮಾನ್ಯವರ್ ಬಟ್ಟೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ಅಗ್ನಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಈ ಮಾನ್ಯವರ್ ಬಟ್ಟೆ ಅಂಗಡಿಯಿದ್ದು,ಶಾರ್ಟ್‌ಸರ್ಕ್ಯೂಟ್‌ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿರಬೋದು ಎಂದು ಶಂಕಿಸಲಾಗ್ತಿದೆ.
ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಅಗ್ನಿ ಅವಘಡ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.