News Kannada
Monday, November 28 2022

ಬೆಂಗಳೂರು ನಗರ

ವಿಧಾನಪರಿಷತ್‌ ಚುನಾವಣೆಯಲ್ಲಿ ಶೇ.99.78ರಷ್ಟು ಮತ ಪ್ರಮಾಣ ದಾಖಲು - 1 min read

Photo Credit :

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ರಾಜಕೀಯವಾಗಿ ಜಿದ್ದಾಜಿದ್ದಿಯಾಗಿ ನಗರ ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳ ಚುನಾವಣೆಗೆ ಶುಕ್ರವಾರ ಮತದಾನ ನಡೆದಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಶೇ.99ಕ್ಕಿಂತ ಹೆಚ್ಚಿನ ಮತದಾನವಾಗಿದ್ದು, ಒಟ್ಟಾರೆ ಶೇ.99.78ರಷ್ಟು ಮತ ಪ್ರಮಾಣ ದಾಖಲಾಗಿದೆ.

ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿದ್ದ ಈ ಮೇಲ್ಮನೆ ಚುನಾವಣೆಗೆ ಸಂಸದರು, ಶಾಸಕರು, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಮತ ಚಲಾಯಿಸಿದರು. ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಡಿ.14ರಂದು ಫ‌ಲಿತಾಂಶ ಹೊರಬೀಳಲಿದೆ.

ಎಲ್ಲಾ ಕ್ಷೇತ್ರಗಳಲ್ಲಿ ಮತದಾನ ಶಾಂತಿಪೂರ್ಣವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾರರು ಇರುವ ಬೆಳಗಾವಿ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.99.98 ಹಾಗೂ ಅತಿ ಕಡಿಮೆ ಮತದಾರರು ಹೊಂದಿರುವ ಕೊಡಗು ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.99.70ರಷ್ಟು ಮತದಾನವಾಗಿದೆ. 2015ರ ವಿಧಾನಪರಿಷತ್‌ ಚುನಾವಣೆಯಲ್ಲಿ ಒಟ್ಟಾರೆ ಶೇ.99.60ರಷ್ಟು ಮತದಾನವಾಗಿತ್ತು.

See also  ನಮ್ಮ ಕೆಲಸ ಏನಿದೆಯೋ ಅದನ್ನು ನಾವು ಮಾಡುತ್ತಿದ್ದೇವೆ; ಪೊಲೀಸ್ ಆಯುಕ್ತ ಕಮಲ್ ಪಂತ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು