News Kannada
Saturday, March 25 2023

ಬೆಂಗಳೂರು ನಗರ

ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬ

Photo Credit :

ಬೆಂಗಳೂರು,ಡಿ.15 : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ವರ್ಷ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಕೋವಿಡ್-19 ಕಾರಣಕ್ಕೆ ಹುಟ್ಟುಹಬ್ಬ ಆಚರಣೆ ಬೇಡವೆಂದು ಅವರು ಹೇಳಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ ವಿಜೃಂಭಣೆಯಿಂದ ನನ್ನ ಹುಟ್ಟುಹಬ್ಬ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್‌ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ.

ಡಿ.16ರಂದು ನನ್ನ ಜನ್ಮದಿನ. ಕಳೆದೆರಡು ವರ್ಷಗಳಿಂದ ಕೋವಿಡ್-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ-ತುರಾಯಿ ಹಾಕಿ, ಕೇಕ್ ಕತ್ತರಿಸಿ ಸಂಭ್ರಮಿಸುವುದು ಬೇಡ.

ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗುವ ಮೂಲಕ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ.

ಅದ್ಧೂರಿ ಹುಟ್ಟುಹಬ್ಬ ನನಗೆ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ. ಹೊಸ ಚೈತನ್ಯ ಮತ್ತು ದೃಢ ಸಂಕಲ್ಪದೊಂದಿಗೆ ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ ಎಂದು ಹೆಚ್ಡಿಕೆ ಅವರು ಮನವಿ ಮಾಡಿದ್ದಾರೆ.

See also  ಬೆಂಗಳೂರು: ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ್ಯ, ಎಂಜಿನಿಯರ್ ಗಳ ಅಮಾನತು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು