ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡಾಟಿಕೆ ಮೆರೆದ ದುಷ್ಕರ್ಮಿಗಳು ಮುಚ್ಚಿದ ಅಂಗಡಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ.
ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಮೇಶ್ ಎಂಬುವರಿಗೆ ಸೇರಿದ ಕಾಂಡಿಮೆಂಟ್ಸ್ ಗೆ ಪೆಟ್ರೊಲ್ ಹಾಕಿ ಬೆಂಕಿ ಹಚ್ಚುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಘಟನಾ ಸ್ಥಳಕ್ಕೆ ಕುಮಾರಸ್ವಾಮಿಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.