ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ವಿಧೇಯಕ ಮಂಡನೆ, ಲವ್ ಜಿಹಾದ್ ಕಾಯ್ದೆ ಮಂಡಿಸಲು ಒಪ್ಪಿಗೆ ನೀಡಲಾಗಿದೆ.
ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಮತಾಂತರ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ಕಾಯ್ದೆಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಸಿಎಂ ಬೊಮ್ಮಾಯಿ ಇಂದು ಕರೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಹಿನ್ನೆಲೆ ನಾಳೆ ಮಂಡನೆಯಾಗುವ ಸಾಧ್ಯತೆವಿದೆ.
ಆದರೆ ಪ್ರತಿ ಪಕ್ಷಗಳ ತ್ರೀವ ವಿರೋಧವಿದ್ದು, ಕಾಯ್ದೆಯನ್ನು ಜಾರಿಗೆ ತರಲು ಬಿಜೆಪಿ ಸರ್ವ ಸಿದ್ಧತೆ ನಡೆಸಿದೆ. ವಿಧೇಯಕಗೊಳಂದಿಗೆ ಕೆಲ ಪ್ರಶ್ನಾವಳಿಗಳು, ಬದಲಾವಣೆಯೊಂದಿಗೆ ತಿದ್ದುಪಡಿ ವಿಧೇಯಕ ಮಂಡನೆಯಾಗೋ ಸಾಧ್ಯತೆ ಇದೆ.
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ನಾಳೆಯೇ ವಿಧೇಯಕ ಮಂಡಿಸುತ್ತೇವೆ ಎಂದು ತಿಳಿಸಿದ್ದಾರೆ