ರಾಜ್ಯದಲ್ಲಿ ಕೊರೋನಾ ಹೊಸ ರೂಪಾಂತರ ಭೀತಿ ಹೆಚ್ಚುತ್ತಿದ್ದು, ಈ ನಡುವೆ ಹೊಸ ವರ್ಷ ಆಚರಣೆಗೆ ಸರ್ಕಾರ ಕಠಿಣ ನಿರ್ಬಂಧಗಳನ್ನು ವಿಧಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸಭೆ ಮುಕ್ತಾಯದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ , ಬಹಿರಂಗವಾಗಿ ಹೊಸ ವರ್ಷ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸಿರುವುದಾಗಿ ತಿಳಿಸಿದರು.
ಹೊಸ ವರ್ಷ ಆಚರಣೆಯಲ್ಲಿ ಡಿಜೆಗೆ ಅವಕಾಶ ಇಲ್ಲ, ಅದೇ ರೀತಿ ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಂತೆ ರಾಜ್ಯಾದ್ಯಂತ ಯಾವುದೇ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಬಾರ್ ಮತ್ತು ರೆಸ್ಟೋರೆಂಟ್ನಲ್ಲಿ ಶೇ.50ರಷ್ಟು ಜನರಿಗೆ ಅವಕಾಶ ನೀಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿಗೆ ಎರಡು ಲಸಿಕೆ ಕಡ್ಡಾಯವಾಗಿದೆ. ಈ ಮಾರ್ಗಸೂಚಿ ಡಿ.30 – ಜನವರಿ 2ರ ತನಕ ಅನ್ವಯವಾಗಲಿದೆ.
ಕ್ರಿಸ್ ಮಸ್ ಸಂದರ್ಭದಲ್ಲಿ ಕೊರೋನಾ ಮುಂಜಾಗ್ರತಾ ಕ್ರಮದೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಿಸಬೇಕು. ಆ ಮೂಲಕ ಕ್ರಿಸ್ ಮಸ್ ಆಚರಿಸುವಂತೆ ಸಿಎಂ ಮನವಿ ಮಾಡಿದರು.