ಬೆಂಗಳೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರಕಾರದಿಂದ ಸಂಕ್ರಾಂತಿ ಕೊಡುಗೆ ನೀಡಲಾಗಿದೆ. ಅತಿಥಿ ಉಪನ್ಯಾಸಕರ ಬೇಡಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ.
ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿದೆ. ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಅನುಕೂಲ ಆಗಲಿದೆ.
— Basavaraj S Bommai (@BSBommai) January 14, 2022
ಈ ಕುರಿತು ಟ್ವೀಟ್ ಮಾಡಿದ ಸಿಎಂ, ‘ಉಪನ್ಯಾಸಕರ ಬೇಡಿಕೆಯ ಶಿಫಾರಸುಗಳಿಗೆ ಸಮ್ಮತಿ ಸೂಚಿಸಿ ಇಂದು ಕಡತ ವಿಲೇವಾರಿ ಮಾಡಲಾಗಿದೆ. ಇವು ಅತಿಥಿ ಉಪನ್ಯಾಸಕರ ಬಹು ದಿನಗಳ ಬೇಡಿಕೆಯಾಗಿದ್ದವು. ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ.
ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಅನುಕೂಲ ಆಗಲಿದೆ. ಕರ್ನಾಟಕ ಸರಕಾರದ ವತಿಯಿಂದ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ’ ಎಂದು ಹೇಳಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ
ಯುಜಿಸಿ ಅರ್ಹತೆ ಹೊಂದಿ ಐದು ವರ್ಷಕ್ಕಿಂತ ಮೇಲ್ಪಟ್ಟವರಿಗೆ ₹ 13ಸಾವಿರದಿಂದ ₹ 32ಸಾವಿರಕ್ಕೆ ಸಂಬಳ ಏರಿಕೆ ಮಾಡಲಾಗಿದೆ. ಯುಜಿಸಿ ಅರ್ಹತೆ ಇದ್ದು ಐದು ವರ್ಷಗಳಿಂದ ಕಡಿಮೆ ಸೇವೆ ಸಲ್ಲಿಸಿದವರಿಗೆ ₹ 11ಸಾವಿರದಿಂದ ₹ 28ಸಾವಿರಕ್ಕೆ ವೇತನ ಹೆಚ್ಚಿಸಲಾಗಿದೆ.