News Kannada
Monday, November 28 2022

ಬೆಂಗಳೂರು ನಗರ

ಬೆಂಗಳೂರಿನಲ್ಲಿ ಇಂದು 287 ಮಂದಿಗೆ ಓಮಿಕ್ರಾನ್ ಸೋಂಕು ದೃಢ - 1 min read

Photo Credit : IANS

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಜೊತೆ ಜೊತೆಗೆ ಓಮಿಕ್ರಾನ್ ಮಹಾಸ್ಪೋಟವೇ ಉಂಟಾಗುತ್ತಿದೆ. ಇಂದು ಹೊಸದಾಗಿ 287 ಮಂದಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 287 ಜನರಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.

ಅಂದಹಾಗೇ ನಿನ್ನೆ ರಾಜ್ಯದಲ್ಲಿ ಕೊರೋನಾ  ಭೀಕರ ಮಹಾಸ್ಪೋಟವೇ ಉಂಟಾಗಿತ್ತು. 24 ಗಂಟೆಯಲ್ಲಿ ಹೊಸದಾಗಿ 34,047 ಮಂದಿಗೆ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್  ನಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 21,071, ಬೆಳಗಾವಿ 468, ಹಾಸನ 1171, ಮೈಸೂರು 1892, ತುಮಕೂರು 1373 ಸೇರಿದಂತೆ 34,047 ಮಂದಿಗೆ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ ಎಂದು ತಿಳಿಸಿತ್ತು.

34047 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಕಾರಣ, 3220087ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಸೋಂಕಿನಿಂದ 5902 ಜನರು ಗುಣಮುಖರಾಗಿದ್ದಾರೆ. ಇದುವರೆಗೆ 2983645 ಜನರು ಗುಣಮುಖರಾಗಿದ್ದಾರೆ. ಈಗ ರಾಜ್ಯದಲ್ಲಿ 197982 ಸಕ್ರೀಯ ಸೋಂಕಿತರಿದ್ದಾರೆ ಎಂದು ತಿಳಿಸಿತ್ತು.

ಬೆಂಗಳೂರು ನಗರದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ ಒಬ್ಬರು, ದಕ್ಷಿಣ ಕನ್ನಡದಲ್ಲಿ ಇಬ್ಬರು, ಹಾಸನ 01, ಕಲಬುರ್ಗಿ 01, ಮಂಡ್ಯ 01, ಮೈಸೂರು 01, ರಾಮನಗರ 01 ಸೇರಿದಂತೆ 13 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 38,431ಕ್ಕೆ ಏರಿಕೆಯಾಗಿತ್ತು.

See also  ಮಕ್ಕಳನ್ನು ಹುಟ್ಟುಹಬ್ಬಕ್ಕೆ ಕರೆಸಿ ಬಿಸಿಲಿನಲ್ಲಿ ನಿಲ್ಲಿಸಿದ ಶಾಸಕ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು