News Kannada
Saturday, May 14 2022
ಬೆಂಗಳೂರು ನಗರ

ಶಾಲಾ ಕಾಲೇಜುಗಳನ್ನು 15-20 ದಿನಗಳ ಕಾಲ ಮುಚ್ಚಿದರೆ ಒಳ್ಳೆಯದು; ಹೆಚ್.ಡಿ. ಕುಮಾರಸ್ವಾಮಿ 

ಬೆಂಗಳೂರು : ರಾಜ್ಯ ಹಾಗೂ ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ಭಾರೀ ಪ್ರಮಾಣದಲ್ಲಿ ಏರುತ್ತಿರುವ ಕಾರಣ ಮುಂದಿನ 15-20 ದಿನಗಳ ಕಾಲ ಶಾಲಾ ಕಾಲೇಜುಗಳನ್ನು ಮುಚ್ಚಿದರೆ ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಅವರು ರಾಜ್ಯ ಸರಕಾರಕ್ಕೆ ಸಲಹೆ ಮಾಡಿದರು.

ರಾತ್ರಿ ಕರ್ಫ್ಯೂ ಬಗ್ಗೆ ಬಿಜೆಪಿ ಹಾಗೂ ಸರಕಾರದ ನಡುವೆ ಗೊಂದಲ ಇದ್ದು, ಇದರಿಂದ ಸಾಮಾನ್ಯ ಜನರಿಗೆ ತೊಂದರೆ ಆಗುತ್ತಿದೆ ಎಂದೂ ಅವರು ಆಡಳಿತ ಪಕ್ಷಕ್ಕೆ ಚಾಟಿ ಬೀಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಶಾಲಾ ಕಾಲೇಜು, ವಸತಿ ನಿಲಯಗಳನ್ನು ಕೆಲ ಕಾಲ ಬಂದ್ ಮಾಡುವುದು ಒಳ್ಳೆಯದು. ಇಲ್ಲವಾದರೆ ಮಕ್ಕಳು, ವಿದ್ಯಾರ್ಥಿಗಳು ಸಮಸ್ಯೆಗೆ ತುತ್ತಾಗಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ಕೊಟ್ಟರು.

ರಾಜ್ಯದಲ್ಲಿ ಕೋವಿಡ್  ಮೂರನೇ ಅಲೆಯಿಂದ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಹಾಗಿದ್ದರೂ ರಾಜ್ಯದಲ್ಲಿ ದಿನೇ ದಿನೆ ಕೋವಿಡ್ ಅನಾಹುತಗಳ ಗ್ರಾಫ್ ಏರುತ್ತಿದೆ. ಅದರ ಜತೆಗೆ ಈ ಕರ್ಫ್ಯೂ ಬಗ್ಗೆ ಬಿಜೆಪಿ ಮುಖಂಡರಲ್ಲೇ ಕೆಲವು ಗೊಂದಲಗಳಿವೆ ಎಂದರು ಅವರು.

ಆಡಳಿತ ಪಕ್ಷದ ಕೆಲ ಪ್ರಮುಖರು ನೈಟ್ ಕರ್ಫ್ಯೂಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ಅದರ ಪರ ಮಾತನಾಡುತ್ತಾರೆ. ಜನ ಯಾರ ಮಾತು ಕೇಳಬೇಕು? ವ್ಯಾಪಾರಿಗಳು, ಹೋಟೆಲ್ ವ್ಯಾಪಾರಿಗಳು, ಇನ್ನಿತರೆ ಸಂಘಟನೆಗಳು ಸಹ ಇದಕ್ಕೆ ವಿರೋಧ ಇದ್ದಾರೆ. ಆದರೂ ಬಿಜೆಪಿ ಮುಖಂಡರ ಗೊಂದಲಮಯ ಹೇಳಿಕೆಗಳು ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.

ನೈಟ್ ಕರ್ಫ್ಯೂ ಜಾರಿ ಮಾಡಿದಾರೆ, ನಿಜ. ಆದರೆ ಕೆಲ ಕಡೆ ವಾಹನಗಳು, ಜನರು ಓಡಾಡ್ತಾ ಇದಾರೆ. ಇದು ಹೊಸ ಅಪಾಯಕ್ಕೆ ದಾರಿ ಆಗದಿರಲಿ. ನೈಟ್ ಕರ್ಫ್ಯೂನಿಂದ ಸಂಪೂರ್ಣವಾಗಿ ಕೋವಿಡ್ ಹತೋಟಿ ಬರುವುದು ಸಾಧ್ಯವೇ? ತಜ್ಞರು ಯಾವ ಅಧಾರದ ಮೇಲೆ ವರದಿ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದು ಅವರು ತಿಳಿಸಿದರು.

ನೈಟ್ ಕರ್ಫ್ಯೂನಿಂದ ಸಮಸ್ಯೆ ಬಗೆಹರಿಯುತ್ತದೆ ಅಂತ ಹೇಳಲು ಸಾಧ್ಯವಿಲ್ಲ. ವೀಕೆಂಡ್ ಲಾಕ್ ಡೌನ್ ಕೂಡ ಎಷ್ಟು ಉಪಯೋಗ ಆಗುತ್ತಿದೆ ಎನ್ನುವುದನ್ನು ನೋಡಬೇಕು. ಜನ ಸಾಮಾನ್ಯರ ಜೀವನಕ್ಕೆ ತೊಂದರೆ ಆಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ತೊಂದರೆ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಅವರ ಜೀವನ ನಿರ್ವಹಣೆಗೆ ಸಹಾಯ ಮಾಡಬೇಕು. ಹಿಂದೆ ನೀಡಿದ್ದಕ್ಕಿಂತ ಉತ್ತಮ ಪ್ಯಾಕೆಜ್ ನೀಡಬೇಕು ಒತ್ತಾಯ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.