News Kannada
Sunday, November 27 2022

ಬೆಂಗಳೂರು ನಗರ

ಬಿಎಂಟಿಸಿಯಿಂದ ರೂ.4 ಲಕ್ಷಕ್ಕೂ ಅಧಿಕ ದಂಡ ವಸೂಲಿ - 1 min read

Photo Credit :

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಒಂದೇ ತಿಂಗಳಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಂದ  4,56,935 ರೂ  ದಂಡ ವಸೂಲಿ ಮಾಡಿದ್ದಲ್ಲದೆ, ಸಂಸ್ಥೆಯ ನಿರ್ವಾಹಕರ ವಿರುದ್ಧ 1686 ಪ್ರಕರಣಗಳನ್ನು ದಾಖಲಿಸಿದೆ.

ಡಿಸೆಂಬರ್ ತಿಂಗಳಲ್ಲಿ ಸಂಸ್ಥೆಯಲ್ಲಿ ಸೋರಿಕೆಯಾಗುತ್ತಿದ್ದ ಆದಾಯವನ್ನು ತಡೆಯುವ ಸಲುವಾಗಿ ತನಿಖಾ ತಂಡಗಳು ವಿವಿಧ ಮಾರ್ಗಗಳಲ್ಲಿ  ಸಂಚರಿಸುವ ಸಾರಿಗೆ ವಾಹನಗಳನ್ನು ತಪಾಸಣೆ ನಡೆಸಿದ್ದು,  ಒಟ್ಟು 23,361 ಟ್ರಿಪ್‍ಗಳನ್ನು ತಪಾಸಣೆ ಮಾಡಿ 3024 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 4,56,935 ರೂ. ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1686 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇನ್ನೊಂದೆಡೆ ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ 274       ಪುರುಷ  ಪ್ರಯಾಣಿಕರಿಂದ  ಒಟ್ಟು ರೂ. 27,400ನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟಾರೆಯಾಗಿ ಡಿಸೆಂಬರ್-2021 ರ ಮಾಹೆಯಲ್ಲಿ 3298 ಪ್ರಯಾಣಿಕರಿಂದ ಒಟ್ಟು ರೂ 4,84,335 ದಂಡವನ್ನು ವಸೂಲಿ ಮಾಡಲಾಗಿದೆ.

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್ ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಸಂಸ್ಥೆಯು ತಿಳಿಸಿದೆ.

See also  ವರ್ಷಾಂತ್ಯದಲ್ಲಿ ಮಹದಾಯಿ ಯೋಜನೆಗೆ ಚಾಲನೆ: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು