News Kannada
Monday, May 16 2022
ಬೆಂಗಳೂರು ನಗರ

ರಾಜ್ಯದ ಸರಕಾರಿ ಶಾಲೆಯಲ್ಲಿ ನ್ಯಾನೊ ಉಪಗ್ರಹ ನಿರ್ಮಾಣಕ್ಕೆ 1.90 ಕೋಟಿ ರೂ. ಬಿಡುಗಡೆ

ಬೆಂಗಳೂರು : ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಅಂಗವಾಗಿ ರಾಜ್ಯದ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಒಂದು ನ್ಯಾನೊ ಉಪಗ್ರಹವನ್ನು  ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ 1.90 ಕೋಟಿ ರೂ. ಬಿಡುಗಡೆ ಮಾಡಲು ಆದೇಶಿಸಲಾಗಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದರ ಅಂಗವಾಗಿ ಬೆಂಗಳೂರಿನ ಆಯ್ದ ಒಂದು ಸರಕಾರಿ ಶಾಲೆಯಿಂದ ಪ್ರಾಯೋಗಿಕವಾಗಿ ನ್ಯಾನೊ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾವಣೆ ಮಾಡಲಾಗುವುದು ಎಂದಿದ್ದಾರೆ.

ತಾಂತ್ರಿಕ ತಜ್ಞರ ಸಮಿತಿಯು ಯೋಜನೆಯ ಅನುಷ್ಠಾನದ ಉಸ್ತುವಾರಿ ನೋಡಿಕೊಳ್ಳಲಿದ್ದು, ಕೆಜಿಎಸ್3ಸ್ಯಾಟ್ ಯೋಜನೆಯಡಿ ಇದನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಜತೆಗೆ ಕೇಂದ್ರ ಸರಕಾರದ ಬಾಹ್ಯಾಕಾಶ ಇಲಾಖೆಯ `ಇನ್-ಸ್ಪೇಸ್’ ವಿಭಾಗವು ಕೂಡ ಇದಕ್ಕೆ ಅಗತ್ಯ ಸಹಕಾರ ನೀಡಲಿದೆ. 9ರಿಂದ 12 ತಿಂಗಳ ಅವಧಿಯಲ್ಲಿ ನನಸಾಗಲಿರುವ ಯೋಜನೆಗೆ ಇಸ್ರೋ ಮತ್ತು ಭಾರತೀಯ ತಂತ್ರಜ್ಞಾನ ಕಾಂಗ್ರೆಸ್ ಒಕ್ಕೂಟದ (ಐಟಿಸಿಎ) ಸಹಯೋಗವನ್ನೂ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.