News Kannada
Thursday, May 19 2022
ಬೆಂಗಳೂರು ನಗರ

ರಾಜ್ಯದಲ್ಲಿ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.

ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಈ ಬಾರಿಯೂ ವಿಸ್ತರಿಸಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ. ಹೀಗಾಗಿ ಈ ವರ್ಷ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.