News Kannada
Wednesday, October 05 2022

ಬೆಂಗಳೂರು ನಗರ

ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ, ಇದರ ವಿರುದ್ದ ಹೋರಾಟ ಮಾಡಿ, ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ : ಬಿ.ಸಿ.ನಾಗೇಶ್ - 1 min read

Photo Credit :

ಮೈಸೂರು: ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ದ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ ಎಂದು ಹಿಜಾಬ್ ಧರಿಸಿ ಶಾಲೆಗೆ ಬರುತ್ತೇನೆ ಎನ್ನುತ್ತಿರುವ ವಿದ್ಯಾರ್ಥಿನಿಯರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಖಡಕ್ ಆಗಿ ಹೇಳಿದರು.

ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮಗೆ ಪಾಠ ಬೇಕಾದರೆ ಸಮವಸ್ಟ್ರ ಧರಿಸಿಯೇ ಶಾಲೆಗೆ ಬರಬೇಕು. ಕೇಸರಿ ಶಾಲು, ಹಸಿರು ಶಾಲು ಯಾವುದನ್ನೂ ಧರಿಸಿ ಬಂದರೂ ಅವರಿಗೆ ತರಗತಿಗೆ ಅವಕಾಶ ಇಲ್ಲ.
ಶಾಲಾ ಆವರಣದ ಗೇಟ್ ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ. ಅದರೆ ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೋಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇಂತದ್ದಕ್ಕೆಲ್ಲಾ ಅವಕಾಶ ಇಲ್ಲ ಎಂದು ಗುಡುಗಿದರು.

ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳು ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನ ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ಅವರು ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು.

ಹೆಣ್ಣುಮಕ್ಕಳ ಮುಗ್ದತೆಯನ್ನ ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಶಾಲೆಯ ಒಳಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ. ಇದು ಧರ್ಮದ ಶಿಕ್ಷಣವಲ್ಲ. ಇದನ್ನ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು ಎಂದರು. ಮಂಗಳವಾರ ನ್ಯಾಯಾಲಯದ ಆದೇಶವನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಹಿಜಾಬ್ ಧರಿಸಿ ಶಾಲೆಗೆ ಬರುವುದಕ್ಕೆ ನಿರ್ಬಂಧ ಹೇರಿರುವ ಕ್ರಮವನ್ನು ವಿರೋಧಿಸಿ, ಕೆಲ ಪ್ರಗತಿಪರ ಸಂಘಟನೆಗಳ ಮುಖಂಡರು, ನಗರದಲ್ಲಿ ಶಿಕ್ಷಣ ಸಚಿವರಿಗೆ ಮುತ್ತಿಗೆ ಹಾಕಿದರು. ನಿರ್ಬಂಧ ಹಾಕಿರುವುದನ್ನು ಹಿಂತೆಗೆದುಕೊಳ್ಳಬೇಕೆAದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಶಾಲೆಯಲ್ಲಿ ವಸ್ತç ಸಂಹಿತೆ ಮಾತ್ರ ಜಾರಿಯಲ್ಲಿದೆ. ಮೂರು ನ್ಯಾಯಾಲಯಗಳು ಕೂಡ ಇದನ್ನೇ ಹೇಳಿವೆ.

ಇಲ್ಲಿಯ ತನಕ ಯಾರೂ ಕೂಡ ಹಿಜಾಬ್ ಧರಿಸಿ ಶಾಲೆಗೆ ಬರುತ್ತಿರಲಿಲ್ಲ. ಆದರೆ ಕಳೆದ 15 ದಿನಗಳಿಂದ ಧರಿಸಿಕೊಂಡು ಬರುವ ಮೂಲಕ ವಿವಾದ ಸೃಷ್ಠಿಸುತ್ತಿದ್ದಾರೆ, ಅದಕ್ಕೆ ಅವಕಾಶ ನೀಡುತ್ತಿಲ್ಲ. ಆಯಾ ಸಂಸ್ಥೆಯವರು ಜಾರಿಗೆ ತಂದಿರುವ ಶಾಲಾ ವಸ್ತçಗಳನ್ನು ಮಾತ್ರ ವಿದ್ಯಾರ್ಥಿಗಳು ಧರಿಸಿಕೊಂಡು ಬರಬೇಕು ಎಂದರು.

See also  ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು