News Kannada
Saturday, October 01 2022

ಬೆಂಗಳೂರು ನಗರ

ಹಿಜಾಬ್ ಕುರಿತಂತೆ ಅನಗತ್ಯ ಚರ್ಚೆ ಬೇಡ: ವಿಶ್ವೇಶ್ವರ ಹೆಗಡೆ ಕಾಗೇರಿ - 1 min read

Photo Credit :

ಬೆಂಗಳೂರು: ಹಿಜಾಬ್ ಕುರಿತ ವಿಷಯವು ನ್ಯಾಯಾಂಗದ ಅಂಗಳದಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ವೇದಿಕೆಗಳಲ್ಲಿ ಈ ಬಗ್ಗೆ ಅನಗತ್ಯ ಚರ್ಚೆ ಬೇಡ ಎಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ  ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.

ವಿಧಾನ ಮಂಡಲದ ಸಮಿತಿ ಕೊಠಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮದಂತಹ ಸೂಕ್ಷ್ಮ ವಿಚಾರಗಳ ಕುರಿತು ವಾದ ವಿವಾದಗಳು ನಡೆದಾಗ ಸಂದರ್ಭದ ದುರುಪಯೋಗ ಮಾಡಿಕೊಳ್ಳುವವರು ಹಾಗೂ ದುರ್ಲಾಭ ಪಡೆಯುವವರು ಇರುತ್ತಾರೆ ಎಂಬ ಬಗ್ಗೆ ಎಚ್ಚರ ಮತ್ತು ಜಾಗೃತಿ ನಮ್ಮಲ್ಲಿ ಇರಬೇಕು. ನ್ಯಾಯಾಂಗದ ವ್ಯವಸ್ಥೆಯಲ್ಲಿ ಗೌರವವಿಟ್ಟು ನ್ಯಾಯಾಲಯದ ತೀರ್ಪು ಹೊರ ಹೊಮ್ಮುವವರೆಗೂ ತಾಳ್ಮೆ ಮತ್ತು ಸಂಯಮ ಕಾಯ್ದುಕೊಳ್ಳುವುದು ರಾಜ್ಯದ ಹಾಗೂ ರಾಷ್ಟ್ರದ ದೃಷ್ಠಿಯಿಂದ ಒಳಿತು ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯದ 15 ನೇ ವಿಧಾನ ಸಭೆಯ 12 ನೇ ಅಧಿವೇಶನವು  ಫೆಬ್ರವರಿ 14 ರಿಂದ 25 ರವರೆಗೆ ಬೆಂಗಳೂರಿನ ವಿಧಾನ ಸೌಧದ ವಿಧಾನ ಸಭಾ ಸಭಾಂಗಣದಲ್ಲಿ ನಡೆಯಲಿದೆ. ಅಲ್ಲದೆ, ಸಂಪ್ರದಾಯದಂತೆ ವರ್ಷದ ಈ ಮೊದಲ ಅಧಿವೇಶನದ ಸಂದರ್ಭದಲ್ಲಿ ಫೆಬ್ರವರಿ 14 ರಂದು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ ಎಂದು ಪ್ರಕಟಿಸಿದ್ದಾರೆ.

ರಾಜ್ಯಪಾಲರ ಭಾಷಣದ ನಂತರ ಮತ್ತೆ ಸದನವು ಸಮಾವೇಶಗೊಂಡು ಕಳೆದ ಅಧಿವೇಶನದ ನಂತರ ಹಾಗೂ ಪ್ರಸಕ್ತ ಅಧಿವೇಶನದ ಅವಧಿಯಲ್ಲಿ ಮೃತರಾದ ಸದನದ ಸದಸ್ಯರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಗಣ್ಯರಿಗೆ ಸಂತಾಪ ಸೂಚಿಸಲಿದೆ. ಮರುದಿನದಿಂದ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಸಂಬಂಧಿಸಿದಂತೆ ಚರ್ಚೆ ಸರ್ಕಾರದ ಉತ್ತರ ಮತ್ತು  ವಂದನಾ ನಿರ್ಣಯದ ಅಂಗೀಕಾರ, ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆಗಳು, ನಿಯಮ 69ರ ಮೇಲಿನ ಸೂಚನೆಗಳು, ಖಾಸಗಿ ಸದಸ್ಯರ ಕಾರ್ಯಕಲಾಪಗಳನ್ನು ಹಾಗೂ ಇತರೆ ಪ್ರಾಮುಖ್ಯ ವಿಷಯಗಳ ಚರ್ಚೆಗೆ ಎಂದಿನಂತೆ ಅವಕಾಶವಿರುತ್ತದೆ ಎಂದು ಅವರು ಹೇಳಿದ್ದಾರೆ.

See also  ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆಯಲ್ಲಿ ಅಂತರ್ ರಾಜ್ಯ ವಿಚಾರಗಳ ಚರ್ಚೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು