News Kannada
Friday, September 30 2022

ಬೆಂಗಳೂರು ನಗರ

ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ರಾಜ್ಯ ಸರಕಾರ ಪರಿಶೀಲನೆ ಮಾಡುತ್ತಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ - 1 min read

Photo Credit :

ರಾಜ್ಯದಲ್ಲಿ ಹಿಜಾಬ್ ವಿವಾದ ಒಂದೆಡೆ ನಡೆಯುತ್ತಿದ್ದು, ಇದರ ನಡುವೆ ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ರಾಜ್ಯ ಸರಕಾರ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವರು,ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ, ಸಮಸ್ಯೆ ಆದ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಅದನ್ನು ನಾವು ಪರಿಶೀಲನೆ ಮಾಡ್ತಿದ್ದೇವೆ ಎಂದು ತಿಳಿಸಿದರು.

ಇನ್ನು ಇದೇ ವೇಳೆ ನ್ಯಾಯಾಲಯದ ಆದೇಶ ಪಾಲನೆ ಮಾಡುವುದು ನಮ್ಮ ಜವಾಬ್ದಾರಿಯಾಗಿದ್ದು, ಅದರ ಅರಿವು ನಮಗಿದೆ. ಎಲ್ಲರೂ ಆದೇಶಕ್ಕೆ ಬದ್ಧ ಆಗಿರಬೇಕು ಎಂದರು.

ಇನ್ನು ಹಿಜಾಬ್ ವಿವಾದದ ಬಗ್ಗೆ ಸದನದಲ್ಲಿ ಉತ್ತರ ಕೊಡಲಾಗುವುದು. ನಮಗೂ ಸಮವಸ್ತ್ರ ಪಾಲನೆ ವಿಚಾರದಲ್ಲಿ ಸ್ಪಷ್ಟತೆ ತರುವ ಸದುದ್ದೇಶ ಇದೆ. ಇವತ್ತು ಸದನದಲ್ಲಿ ಈ ವಿಚಾರ ಪ್ರಸ್ತಾಪ ಆಗಿದೆ. ಅಗತ್ಯವಿರುವಷ್ಟು ಉತ್ತರ ಕೊಡಲಾಗಿದೆ. ಇನ್ನೂ ಹೆಚ್ಚಿನ ಉತ್ತರ ನಾವು ಕೊಡಲು ಶಕ್ತವಾಗಿದ್ದೇವೆ. ಕೋರ್ಟ್ ಆದೇಶ ಪಾಲನೆ ಮಾಡುವುದು ನಮ್ಮ ಜವಾಬ್ದಾರಿ. ಅದರ ಅರಿವು ನಮಗಿದೆ. ಎಲ್ಲರೂ ಆದೇಶಕ್ಕೆ ಬದ್ಧ ಆಗಿರಬೇಕು ಎಂದು ಜ್ಞಾನೇಂದ್ರ ಹೇಳಿದ್ದಾರೆ.

See also  ಭೂಗತ ಪಾತಕಿ ರವಿ ಪೂಜಾರಿ ಮುಂಬಯಿ ಪೊಲೀಸ್ ಕಸ್ಟಡಿಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು